HomeKarnatakaRain Alert : ಕರಾವಳಿ ಭಾಗದಲ್ಲಿ ವರುಣನ ಆರ್ಭಟ : ಇಂದು ಈ ಜಿಲ್ಲೆಗಳಲ್ಲಿ ಶಾಲೆ,ಕಾಲೇಜುಗಳಿಗೆ...

Rain Alert : ಕರಾವಳಿ ಭಾಗದಲ್ಲಿ ವರುಣನ ಆರ್ಭಟ : ಇಂದು ಈ ಜಿಲ್ಲೆಗಳಲ್ಲಿ ಶಾಲೆ,ಕಾಲೇಜುಗಳಿಗೆ ರಜೆ ಘೋಷಣೆ

ಬೆಂಗಳೂರು : ಕರ್ನಾಟಕದ ಕರಾವಳಿ ಭಾಗದಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇಂದು ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಉಡುಪಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಇಂದು ಶಾಲೆ, ಪಿಯು ಕಾಲೇಜುಗಳಿಗೆ ಉಡುಪಿ ಜಿಲ್ಲಾಧಿಕಾರಿ ಕುರ್ಮಾರಾವ್ ಆದೇಶ ಹೊರಡಿಸಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು,  ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಭಟ್ಕಳ, ಹೊನ್ನಾವರ ,ಕುಮಟಾ, ಅಂಕೋಲಾ ತಾಲೂಕಿನ  ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಪ್ರಭುಲಿಂಗ್ ಕಲವಿಕಟ್ಟಿ ಆದೇಶ ಹೊರಡಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶಾಲೆ, ಪಿಯು ಕಾಲೇಜುಗಳಿಗೆ ಡಿಸಿ ಮುಲ್ಲೈ ಮುಗಿಲನ್ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular