HomeKarnatakaRain Alert : ರಾಜ್ಯದಲ್ಲಿ ಮುಂದಿನ 24 ಗಂಟೆ ಭಾರೀ ಮಳೆ : ಈ ಜಿಲ್ಲೆಗಳಿಗೆ...

Rain Alert : ರಾಜ್ಯದಲ್ಲಿ ಮುಂದಿನ 24 ಗಂಟೆ ಭಾರೀ ಮಳೆ : ಈ ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ

ಬೆಂಗಳೂರು : ರಾಜ್ಯದಲ್ಲಿ ಮತ್ತೆ ಮುಂಗಾರು ಮಳೆ ಚುರುಕುಗೊಂಡಿದ್ದು, ಮುಂದಿನ 24 ಗಂಟೆಯಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕಳೆದ 20 ದಿನಗಳಿಂದ ದುರ್ಬಲಗೊಂಡಿದ್ದ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ಬೆಂಗಳೂರು, ಮೈಸೂರು, ಚಿಕ್ಕಮಗಳೂರು, ದಕ್ಷಿಣ ಕನ್ನಡ, ದಾವಣಗೆರೆ ಸೇರಿದಂತೆ ರಾಜ್ಯದ ಹಲವಡೆ ಶನಿವಾರ ಮಳೆಯಾಗಿದೆ. ಈ ಮೂಲಕ ಮಳೆಯ ನಿರೀಕ್ಷೆಯಲ್ಲಿದ್ದ ರೈತರ ಮೊಗದಲ್ಲಿ ಸಂತಸ ಮೂಡಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮುಂದಿನ 24 ಗಂಟೆಯಲ್ಲಿ ಕರಾವಳಿಯ ಮೂರು ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಇಂದು ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular