ಬೆಂಗಳೂರು : ಮುಂದಿನ 3 ಗಂಟೆಗಳಲ್ಲಿ ರಾಜ್ಯದ ಈ ಭಾಗದಲ್ಲಿ ಭಾರಿ ಮಳೆ ( Heavy Rain) ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮುಂದಿನ 3 ಗಂಟೆಗಳಲ್ಲಿ ಧಾರವಾಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಬಲವಾದ ಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.ರಾಜ್ಯದ ಒಳನಾಡು ಪ್ರದೇಶಗಳಲ್ಲಿ ಈ ವಾರ ಭಾರು ಮಳೆಯಾಗುವ ಬಗ್ಗೆ ಮಾಹಿತಿ ಸಿಕ್ಕಿದೆ. ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಹೊಂದಿಕೊಂಡ ಉತ್ತರ ಒಳನಾಡು ಮತ್ತು ಮಲೆನಾಡು ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆ ಬೀಳಬಹುದು ಎನ್ನಲಾಗಿದೆ.
ಬೆಂಗಳೂರಿನಲ್ಲಿ ನಿನ್ನೆ ಬೆಳಗ್ಗೆಯಿಂದಲೂ ಮಧ್ಯಾಹ್ನದವರೆಗೂ ಬಿಸಿಲಿನ ವಾತಾವರಣವಿದ್ದು, ಮಧ್ಯಾಹ್ನ 4 ಗಂಟೆಯಿಂದಲೂ ಮೋಡ ಕವಿದಿದ್ದು, ರಾತ್ರಿ 9 ಗಂಟೆ ವೇಳೆಗೆ ನಗರದ ಹಲವೆಡೆ ಸಣ್ಣ ಮಳೆಯಾಗಿದೆ.
https://twitter.com/SEOC_Karnataka/status/1673208305467166721?ref_src=twsrc%5Etfw%7Ctwcamp%5Etweetembed%7Ctwterm%5E1673208305467166721%7Ctwgr%5Ec69cbc59079ec7c37891d4ae7b64e3563d1bcdf5%7Ctwcon%5Es1_&ref_url=https%3A%2F%2Fkannada.oneindia.com%2Fnews%2Fkarnataka%2Fkarnataka-rain-information-by-imd-today-299359.html