HomeAgricultureಮಳೆ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ಇಂದಿನಿಂದ 10 ದಿನ ವಾಡಿಕೆಗಿಂತ ಹೆಚ್ಚಿನ ಮಳೆ ಮುನ್ಸೂಚನೆ

ಮಳೆ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ಇಂದಿನಿಂದ 10 ದಿನ ವಾಡಿಕೆಗಿಂತ ಹೆಚ್ಚಿನ ಮಳೆ ಮುನ್ಸೂಚನೆ

ಬೆಂಗಳೂರು: ಇಂದಿನಿಂದ 10 ದಿನ ರಾಜ್ಯದಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದಲ್ಲಿ ಒಂದು ವಾರದಿಂದ ಮೋಡಕವಿದ ವಾತಾವರಣ ಇದೆ. ಕರಾವಳಿ ಮತ್ತು ಒಳನಾಡು ಭಾಗದ ಅಲ್ಲಲ್ಲಿ ಸಾಧಾರಣ ಮಳೆಯಾಗುತ್ತಿದೆ. ಶನಿವಾರದಿಂದ ಮಳೆಯ ಪ್ರಮಾಣ ಇನ್ನಷ್ಟು ಹೆಚ್ಚಾಗಲಿದೆ. ಸೆಪ್ಟೆಂಬರ್ 22 ರಿಂದ 10 ದಿನಗಳ ಕಾಲ ವಾಡಿಕೆ, ವಾಡಿಕೆಗಿಂತ ಹೆಚ್ಚಿನ ಮಳೆಯಾಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಕ್ಟೋಬರ್ 3ರವರೆಗೆ ರಾಜ್ಯದಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆಯಿದ್ದು, ಮಳೆಯ ಕೊರತೆ ಪ್ರಮಾಣ ಸ್ವಲ್ಪ ಮಟ್ಟಿಗೆ ಕಡಿಮೆಯಾಗಲಿದೆ ಎಂದು ಹೇಳಲಾಗಿದೆ. ಮಳೆ ಇಲ್ಲದೇ ಬೆಳೆಗಳು ಒಳಗಲಾರಂಭಿಸಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಹೊತ್ತಲ್ಲಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿರುವುದು ರೈತರಲ್ಲಿ ಆಶಾಭಾವನೆ ತಂದಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular