HomeAgricultureಮುಂಗಾರು ನಿರೀಕ್ಷೆಯಲ್ಲಿದ್ದ ರೈತರಿಗೆ ಶಾಕ್: ‘ಬಪರ್ ಜಾಯ್’ ಚಂಡಮಾರುತ ಪರಿಣಾಮ ಮಾನ್ಸೂನ್ ವಿಳಂಬ

ಮುಂಗಾರು ನಿರೀಕ್ಷೆಯಲ್ಲಿದ್ದ ರೈತರಿಗೆ ಶಾಕ್: ‘ಬಪರ್ ಜಾಯ್’ ಚಂಡಮಾರುತ ಪರಿಣಾಮ ಮಾನ್ಸೂನ್ ವಿಳಂಬ

ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಪರಿಣಾಮ ಬಿಪರ್ ಜಾಯ್ ಚಂಡಮಾರುತ ಸೃಷ್ಟಿಯಾಗಿದ್ದು, ವೇಗ ವೃದ್ಧಿಸಿಕೊಳ್ಳುತ್ತಿದೆ. ಈ ಚಂಡಮಾರುತದ ಪರಿಣಾಮ ಮುಂಗಾರು ಆಗಮನ ಮತ್ತಷ್ಟು ವಿಳಂಬವಾಗಲಿದೆ.

ಗುಜರಾತ್ ನ ಪೋರಬಂದರ್ ನ ದಕ್ಷಿಣಕ್ಕೆ 10,60 ಕಿಲೋಮೀಟರ್, ಮುಂಬೈ ನೈರುತ್ಯಕ್ಕೆ 990 ಕಿಲೋಮೀಟರ್ ದೂರದಲ್ಲಿ ಸೈಕ್ಲೋನ್ ರೂಪುಗೊಂಡಿದ್ದು, ಅರಬ್ಬಿ ಸಮುದ್ರದ ದಕ್ಷಿಣದತ್ತ ಮಾರುತಗಳು ಚಲಿಸುತ್ತಿವೆ. ಕರ್ನಾಟಕದಿಂದ ಸಾವಿರಾರು ಕಿಲೋಮೀಟರ್ ದೂರದಲ್ಲಿ ಚಂಡಮಾರುತ ರೂಪಗೊಂಡಿದ್ದು, ತೇವಾಂಶ ಭರಿತ ಮೋಡಗಳನ್ನು ಸೆಳೆಯುತ್ತಿದೆ. ಇದರಿಂದ ಮಾನ್ಸೂನ್ ವಿಳಂಬವಾಗಲಿದೆ ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಚಂಡಮಾರುತದಿಂದಾಗಿ ರಾಜ್ಯದಲ್ಲಿ ಭಾರಿ ಮಳೆ ಆಗುವುದಿಲ್ಲ. ಆದರೆ ಸಮುದ್ರದಲ್ಲಿ ದೊಡ್ಡ ಗಾತ್ರದ ಅಲೆಗಳು ಏಳಲಿವೆ. ಮೀನುಗಾರರು ವಾಪಸ್ ಬರುವಂತೆ, ಸಮುದ್ರ ತೀರದ ನಿವಾಸಿಗಳು ಎಚ್ಚರಿಕೆಯಿಂದ ಇರುವಂತೆ ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಇನ್ನು ಜೂನ್ 11 ರಿಂದ ರಾಜ್ಯದಲ್ಲಿ ಗುಡುಗು ಮಿಂಚು ಸಹಿತ ಮೂರು ದಿನ ಸಾಧಾರಣ ಮಳೆ ಆಗಲಿದೆ. ಕರಾವಳಿ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆ ಆಗಲಿದೆ. ಜೂನ್ 11 ರಿಂದ ಮುಂದಿನ ಎರಡು ದಿನ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಜೂನ್ 11ರಂದು ಚಿತ್ರದುರ್ಗ, ತುಮಕೂರು, ಜೂನ್ 12 ರಂದು ಕೋಲಾರದಲ್ಲಿ ಭಾರಿ ಮಳೆ ಆಗುವ ಸಾಧ್ಯತೆಯಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular