HomeKarnatakaರೈತಾಪಿ ವರ್ಗಕ್ಕೆ ಗುಡ್ ನ್ಯೂಸ್: ನಾಳೆಯಿಂದ ಮತ್ತೆ ಮಳೆ ಚುರುಕು

ರೈತಾಪಿ ವರ್ಗಕ್ಕೆ ಗುಡ್ ನ್ಯೂಸ್: ನಾಳೆಯಿಂದ ಮತ್ತೆ ಮಳೆ ಚುರುಕು

ಬೆಂಗಳೂರು: ವಾರಾಂತ್ಯದಿಂದ ದಕ್ಷಿಣ ಒಳನಾಡಿನಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದಲ್ಲಿ ದುರ್ಬಲಗೊಂಡಿರುವ ನೈರುತ್ಯ ಮುಂಗಾರು, ರೈತರಿಗೆ ಸಂಕಷ್ಟ ತಂದಿದೆ. ಕರಾವಳಿಯ ಕೆಲವು ಕಡೆ ಸಾಧಾರಣ ಮಳೆಯಾಗುತ್ತಿದೆ. ಈ ವಾರಾಂತ್ಯದ ಬೆಳಗೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಳೆದ ಎರಡು ವಾರಗಳಿಂದ ಬಹುತೇಕ ಭಾಗದಲ್ಲಿ ಮಳೆಯಾಗಿಲ್ಲ. ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆದಿದೆ. ಕೃಷಿ ಚಟುವಟಿಕೆ ಮೇಲೆ ಪರಿಣಾಮ ಬೀರಿದ್ದು, ರೈತರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಬಹುತೇಕ ಜಲಾಶಯಗಳಲ್ಲಿ ನೀರಿನ ಹರಿವು ಕಡಿಮೆಯಾಗಿದ್ದು, ಮಳೆ ಆಶ್ರಿತ, ನೀರಾವರಿ ಬೆಳೆಗಳಿಗೆ ಸಮಸ್ಯೆಯಾಗಿದೆ. ಶನಿವಾರ ಭಾನುವಾರದಿಂದ ಕೆಲವು ದಿನಗಳ ಕಾಲ ಮಲೆನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಹಾಸನ ಹಾಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆ ಆಗಲಿದೆ ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular