HomeKarnatakaರಾಜ್ಯದ ಹಲವೆಡೆ ಆ. 20 ರವರೆಗೆ ಧಾರಾಕಾರ ಮಳೆ ಮುನ್ಸೂಚನೆ

ರಾಜ್ಯದ ಹಲವೆಡೆ ಆ. 20 ರವರೆಗೆ ಧಾರಾಕಾರ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಹಲವೆಡೆ ಮುಂಗಾರು ಚುರುಕುಗೊಂಡಿದ್ದು, ಬೆಂಗಳೂರು ಸೇರಿ ಹಲವಡೆ ಮಳೆಯಾಗಿದೆ. ಆಗಸ್ಟ್ 20ರವರೆಗೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉತ್ತರ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಬಾಗಲಕೋಟೆ, ಬೀದರ್, ಗದಗ, ಧಾರವಾಡ, ವಿಜಯಪುರ, ಕೊಪ್ಪಳ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಚಾಮರಾಜನಗರ, ಚಿತ್ರದುರ್ಗ, ಕೊಡಗು, ಹಾಸನ, ದಾವಣಗೆರೆ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಕೆಲವೆಡೆ ಗುಡುಗು ಸಹಿತ ಮಳೆಯಾಗುವ ಸಂಭವ ಇದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular