HomeKarnatakaಕರಾವಳಿ, ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ: ಉತ್ತರ ಒಳನಾಡಿನಲ್ಲಿ ಒಣಹವೆ

ಕರಾವಳಿ, ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ: ಉತ್ತರ ಒಳನಾಡಿನಲ್ಲಿ ಒಣಹವೆ

ಬೆಂಗಳೂರು: ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳ ಕೆಲವೆಡೆ ಮುಂದಿನ 24 ಗಂಟೆಗಳ ಕಾಲ ಸಾಧಾರಣ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ತಗ್ಗಿದ್ದು, ಒಣ ಹವೆ ಇರಲಿದೆ ಎಂದು ಹೇಳಲಾಗಿದೆ.

ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ದಕ್ಷಿಣ ಒಳನಾಡಿನ ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಉತ್ತರ ಒಳನಾಡಿನ ಬಾಗಲಕೋಟೆ, ಕಲಬುರಗಿ, ರಾಯಚೂರು, ಚಿತ್ರದುರ್ಗ, ಕೊಪ್ಪಳ, ಗದಗ, ದಾವಣಗೆರೆ ಜಿಲ್ಲೆಗಳಲ್ಲಿ ಬಿಸಿಲಿನ ವಾತಾವರಣ ಇರಲಿದ್ದು, ತಾಪಮಾನ ಹೆಚ್ಚಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಕೆಲವು ಪ್ರದೇಶಗಳಲ್ಲಿ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆ ಇದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular