HomeKarnatakaರಾಜ್ಯದ ಕೆಲವು ಜಿಲ್ಲೆಗಳಲ್ಲಿ ನಾಲ್ಕೈದು ದಿನ ಗುಡುಗು ಸಿಡಿಲಿನೊಂದಿಗೆ ಮಳೆ, ಇನ್ನುಳಿದ ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿ...

ರಾಜ್ಯದ ಕೆಲವು ಜಿಲ್ಲೆಗಳಲ್ಲಿ ನಾಲ್ಕೈದು ದಿನ ಗುಡುಗು ಸಿಡಿಲಿನೊಂದಿಗೆ ಮಳೆ, ಇನ್ನುಳಿದ ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿ ಗಾಳಿ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ನಾಲ್ಕೈದು ದಿನಗಳ ಕಾಲ ಮಳೆಯಾಗಲಿದೆ. ಕೆಲವು ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಮತ್ತೆ ಕೆಲವು ಜಿಲ್ಲೆಗಳಲ್ಲಿ ಬಿಸಿ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮೇ 4ರಂದು ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೊಡಗು, ಚಿಕ್ಕಮಗಳೂರು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಜಿಲ್ಲೆಗಳಲ್ಲಿ ಗುಡುಗು ಸಿಡಿಲಿನಿಂದ ಕೂಡಿದ ಮಳೆಯಾಗಬಹುದು ಎಂದು ಹೇಳಲಾಗಿದೆ.

ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮೇ 8, 9, 10ರಂದು ಹಗುರ ಮಳೆ ಆಗಲಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಮೇ 7, 8ರಂದು ಗುಡುಗು ಸಿಡಿಲಿನಿಂದ ಕೂಡಿದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಶುಕ್ರವಾರ ಮಂಡ್ಯ, ಶ್ರೀರಂಗಪಟ್ಟಣ, ಚಾಮರಾಜನಗರ, ಗುಂಡ್ಲುಪೇಟೆ, ಬೆಂಗಳೂರು, ಮೈಸೂರು, ಕೊಡಗು, ರಾಮನಗರ ಭಾಗದಲ್ಲಿ ಮಳೆಯಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular