HomeKarnatakaನಾಳೆಯಿಂದ 5 ದಿನ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಹಗುರ ಮಳೆ ಮುನ್ಸೂಚನೆ

ನಾಳೆಯಿಂದ 5 ದಿನ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಹಗುರ ಮಳೆ ಮುನ್ಸೂಚನೆ

ಬೆಂಗಳೂರು: ಬಿಸಿಲ ಬೇಗೆ ನಡುವೆ ಏಪ್ರಿಲ್ 7ರಿಂದ 11ರವರೆಗೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮುಂದಿನ ಒಂದು ವಾರ ಕರಾವಳಿ, ಮಲೆನಾಡು, ದಕ್ಷಿಣ ಒಳನಾಡು, ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮಳೆಯಾಗುವ ಸಂಭವವಿದೆ ಎಂದು ಹೇಳಲಾಗಿದೆ.

ಬೀದರ್, ಮೈಸೂರು, ಕಲಬುರಗಿ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಹಾವೇರಿ, ಧಾರವಾಡ, ಗದಗ, ವಿಜಯಪುರ, ಕೊಪ್ಪಳ, ಬಳ್ಳಾರಿ, ಚಾಮರಾಜನಗರ, ದಾವಣಗೆರೆ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಮಂಡ್ಯ, ಹಾಸನ, ರಾಮನಗರ, ಚಿತ್ರದುರ್ಗ, ವಿಜಯನಗರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಯ ಒಂದೆರಡು ಕಡೆ ಮಳೆಯಾಗುವ ಸಂಭವ ಇದೆ ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular