HomeKarnatakaರಾಜ್ಯದ ಕೆಲವೆಡೆ ಆಲಿ ಕಲ್ಲು ಮಳೆ: ಇನ್ನೆರಡು ದಿನ ಸಾಧಾರಣ ಮಳೆ ಸಂಭವ

ರಾಜ್ಯದ ಕೆಲವೆಡೆ ಆಲಿ ಕಲ್ಲು ಮಳೆ: ಇನ್ನೆರಡು ದಿನ ಸಾಧಾರಣ ಮಳೆ ಸಂಭವ

ಬೆಂಗಳೂರು: ರಾಜ್ಯದಲ್ಲಿ ಈ ವರ್ಷ ಮೊದಲ ಮಳೆಯಾಗಿದೆ. ಕೊಡಗು, ಶಿರಸಿ, ಶಿವಮೊಗ್ಗ, ಚಿಕ್ಕಮಗಳೂರು ಭಾಗದಲ್ಲಿ ಗಾಳಿ ಮಳೆಯಾಗಿದೆ. ಸುಂಟಿಕೊಪ್ಪ, ಶಿರಸಿಯ ಕೆಲವು ಪ್ರದೇಶದಲ್ಲಿ ಆಲಿಕಲ್ಲು ಮಳೆಯಾಗಿದೆ. ವರ್ಷದ ಮೊದಲ ಮಳೆ ತಂಪೆರದಿದೆ.

ಕೊಡಗು ಜಿಲ್ಲೆಯ ಹಲವೆಡೆ ಮಳೆಯಾಗಿದೆ. ಸುಂಟಿಕೊಪ್ಪ ಬಳಿ ಗಾಳಿ ಸಹಿತ ಆಲಿ ಕಲ್ಲು ಮಳೆಯಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಹೊರನಾಡು, ಕೊಪ್ಪ, ಮೂಡಿಗೆರೆ ಸೇರಿದಂತೆ ಹಲವು ಕಡೆ ಮಳೆಯಾಗಿದೆ. ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಲಕ್ಷಣಗಳು ಕಾಣುತ್ತಿದ್ದು, ಮುಂದಿನ 48ಗಳ ಗಂಟೆಗಳ ಕಾಲ ಕರಾವಳಿ, ಉತ್ತರ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಿಸಿಲ ಪ್ರಮಾಣ ಹೆಚ್ಚಾಗಿ ಸಮುದ್ರದ ಮೇಲ್ಮೈ ಸುಳಿಗಾಳಿ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ರಾಜ್ಯದ ವಿವಿಧಡೆ ಗಾಳಿ ಹಾಗೂ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಉತ್ತರ ಒಳನಾಡಿನ ಗದಗ, ಬೆಳಗಾವಿ, ಬಾಗಲಕೋಟೆ, ಕಲಬುರ್ಗಿ, ಕೊಪ್ಪಳ, ರಾಯಚೂರು, ಹಾವೇರಿ, ಯಾದಗಿರಿ, ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಚಾಮರಾಜನಗರ, ಹಾಸನ, ಕೊಡಗು, ಶಿವಮೊಗ್ಗ, ಮೈಸೂರು, ತುಮಕೂರು ಜಿಲ್ಲೆಯ ಕೆಲವು ಕಡೆ ಮಿಂಚು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular