HomeKarnatakaಇಂದಿನಿಂದ ಮೂರು ದಿನ ಬಿಸಿಲು ಜತೆ ಸಾಧಾರಣ ಮಳೆ

ಇಂದಿನಿಂದ ಮೂರು ದಿನ ಬಿಸಿಲು ಜತೆ ಸಾಧಾರಣ ಮಳೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಒಳನಾಡಿನ 5 ಜಿಲ್ಲೆಗಳಲ್ಲಿ ಏಪ್ರಿಲ್ 4ರಿಂದ 6ರವರೆಗೆ ಬಿಸಿ ಗಾಳಿ ಬೀಸಲಿದೆ. ಬಾಗಲಕೋಟೆ, ಗದಗ, ಕಲಬುರಗಿ, ವಿಜಯಪುರ, ಕೊಪ್ಪಳ ಜಿಲ್ಲೆಗಳಲ್ಲಿ ಮೂರು ದಿನ ಬಿಸಿ ಗಾಳಿ ಬೀಸಲಿದೆ.

ಏಪ್ರಿಲ್ 7ರಿಂದ 9ರವರೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗಲಿದೆ. ಏಪ್ರಿಲ್ 7ರಂದು ಉಡುಪಿ, ದಕ್ಷಿಣ ಕನ್ನಡ, ಹಾಸನ, ಕೊಡಗು, ಚಿಕ್ಕಮಗಳೂರು, ಮಂಡ್ಯ, ತುಮಕೂರು, ಮೈಸೂರು ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಂಭವ ಇದೆ. ಉಳಿದ ಜಿಲ್ಲೆಗಳಲ್ಲಿ ಒಣಹವೆ ಹೆಚ್ಚಾಗಿರುತ್ತದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಏ. 8 ರಂದು ಯಾದಗಿರಿ, ವಿಜಯಪುರ, ರಾಯಚೂರು, ಬಾಗಲಕೋಟೆ, ಹಾಸನ, ಕೊಡಗು, ಚಿಕ್ಕಮಗಳೂರು, ಚಿತ್ರದುರ್ಗ, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗಲಿದೆ.

ಏಪ್ರಿಲ್ 9ರಂದು ಉಡುಪಿ, ದಕ್ಷಿಣ ಕನ್ನಡ, ಬಾಗಲಕೋಟೆ, ಬೆಳಗಾವಿ, ಹಾವೇರಿ, ಕೊಪ್ಪಳ, ಧಾರವಾಡ, ಗದಗ, ಚಿಕ್ಕಮಗಳೂರು, ಕೊಡಗು, ರಾಯಚೂರು, ಬಳ್ಳಾರಿ, ದಾವಣಗೆರೆ, ಶಿವಮೊಗ್ಗ, ಹಾಸನ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಚಾಮರಾಜನಗರ, ಮಂಡ್ಯ, ಮೈಸೂರು, ಚಿತ್ರದುರ್ಗ ಜಿಲ್ಲೆಗಳಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆ ಆಗಲಿದೆ ಎಂದು ಹೇಳಲಾಗಿದೆ,

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular