HomeKarnatakaರಾಜ್ಯದ 25 ಜಿಲ್ಲೆಗಳಲ್ಲಿ ಮಳೆ ಕೊರತೆ: ಕೃಷಿ ಚಟುವಟಿಕೆ ಮೇಲೆ ಗಂಭೀರ ಪರಿಣಾಮ; ಬಿತ್ತನೆಗೆ ಹಿನ್ನಡೆ

ರಾಜ್ಯದ 25 ಜಿಲ್ಲೆಗಳಲ್ಲಿ ಮಳೆ ಕೊರತೆ: ಕೃಷಿ ಚಟುವಟಿಕೆ ಮೇಲೆ ಗಂಭೀರ ಪರಿಣಾಮ; ಬಿತ್ತನೆಗೆ ಹಿನ್ನಡೆ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಅನಿಶ್ಚಿತತೆ ಮುಂದುವರೆದಿದೆ. 25 ಜಿಲ್ಲೆಗಳಲ್ಲಿ ಮಳೆ ಕೊರತೆ ಕಂಡು ಬಂದಿದೆ. 187 ತಾಲೂಕುಗಳಲ್ಲಿ ಮಳೆ ಕುಂಠಿತವಾಗಿದೆ.

ಮುಂಗಾರು ವಿಳಂಬದಿಂದ ಕೃಷಿ ಚಟುವಟಿಕೆಗಳ ಮೇಲೆ ಗಂಭೀರ ಪರಿಣಾಮ ಬೀರಿದ್ದು, ಬಿತ್ತನೆ ಕಾರ್ಯಕ್ಕೆ ಹಿನ್ನಡೆಯಾಗಿದೆ. ಈ ವೇಳೆಗಾಗಲೇ ಮಳೆ ಜೋರಾಗಿ ಕೆರೆಕಟ್ಟೆಗಳು ತುಂಬಬೇಕಿತ್ತು, ಕೃಷಿ ಚಟುವಟಿಕೆ ಚುರುಕುಗೊಂಡು ಬಿತ್ತನೆ ಕಾರ್ಯ ಪೂರ್ಣಗೊಳ್ಳುವ ಹಂತಕ್ಕೆ ಬರಬೇಕಿತ್ತು. ಆದರೆ, ಜೂನ್ ಮುಗಿದರೂ ಮಳೆಯ ಲಕ್ಷಣಗಳು ಕಂಡು ಬರುತ್ತಿಲ್ಲ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಿತ್ತನೆಗೆ ಜಮೀನು ಹದ ಮಾಡಲು ಕೂಡ ಮಳೆ ಬೇಕಾಗಿದೆ ಹತ್ತಿ, ಮೆಕ್ಕೆಜೋಳ ಬಿತ್ತನೆಗೆ ಹಿನ್ನಡೆಯಾಗಿದ್ದು, ಮುಂದಿನ ವಾರ ಮಳೆ ಬಂದರೆ ರಾಗಿ ಬಿತ್ತನೆ ಮಾಡಬಹುದು. ಇಲ್ಲದಿದ್ದರೆ ಬಿತ್ತನೆ ಮಾಡಲಾಗುವುದಿಲ್ಲ ಎನ್ನಲಾಗಿದೆ.

ರಾಜ್ಯದಲ್ಲಿ ಜೂನ್ 1ರಿಂದ 29 ರವರೆಗೆ 191 ಮಿ.ಮೀ. ವಾಡಿಕೆ ಮಳೆಯಾಗಬೇಕಿತ್ತು. ಆದರೆ, 81 ಮಿಲಿ ಮೀಟರ್ ಮಳೆಯಾಗಿದೆ. ದಕ್ಷಿಣ ಕರ್ನಾಟಕ, ಉತ್ತರ ಕರ್ನಾಟಕ, ಮಲೆನಾಡು, ಕರಾವಳಿ ಭಾಗದಲ್ಲಿ ವಾಡಿಕೆಗಿಂತಲೂ ಕಡಿಮೆ ಮಳೆಯಾಗಿದ್ದು, ಕೃಷಿ ಚಟುವಟಿಕೆ ಕುಂಠಿತಗೊಳ್ಳುವ ಭೀತಿ ಆವರಿಸಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular