HomeKarnatakaರಾಜ್ಯದೆಲ್ಲೆಡೆ ಇನ್ನೂ ಎರಡು ದಿನ ಮಳೆ ಮುನ್ಸೂಚನೆ

ರಾಜ್ಯದೆಲ್ಲೆಡೆ ಇನ್ನೂ ಎರಡು ದಿನ ಮಳೆ ಮುನ್ಸೂಚನೆ

ಬೆಂಗಳೂರು: ಕರಾವಳಿ, ಉತ್ತರ ಒಳನಾಡಿನ ಕೆಲವು ಕಡೆ ಮತ್ತು ದಕ್ಷಿಣ ಒಳನಾಡಿನ ಹಲವು ಕಡೆ ಮಳೆಯಾಗಿದ್ದು, ಇನ್ನೂ ಎರಡು ದಿನ ಅನೇಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಏಪ್ರಿಲ್ 20ರಂದು ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕಲಬುರಗಿ,  ರಾಯಚೂರು, ಕೊಪ್ಪಳ, ಯಾದಗಿರಿ, ವಿಜಯಪುರ, ಬಳ್ಳಾರಿ, ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ಹಾಸನ, ಚಿತ್ರದುರ್ಗ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ, ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಹಲವು ಕಡೆ ಮಳೆ ಆಗುವ ಸಾಧ್ಯತೆ ಇದೆ.

ಏಪ್ರಿಲ್ 20ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಹಾಸನ, ಚಿಕ್ಕಮಗಳೂರು, ಹಾವೇರಿ, ಧಾರವಾಡ, ಶಿವಮೊಗ್ಗ, ಮೈಸೂರು, ಕೊಡಗು ಜಿಲ್ಲೆಗಳ ಒಂದೆರಡು ಕಡೆ ಮಳೆ ಆಗುವ ಸಾಧ್ಯತೆ ಇದೆ. ಉಳಿದೆ ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular