HomeKarnatakaಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಪರಿಣಾಮ ರಾಜ್ಯದಲ್ಲಿ ಇನ್ನೂ ನಾಲ್ಕು ದಿನ ಭಾರಿ ಮಳೆ

ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಪರಿಣಾಮ ರಾಜ್ಯದಲ್ಲಿ ಇನ್ನೂ ನಾಲ್ಕು ದಿನ ಭಾರಿ ಮಳೆ

ಬೆಂಗಳೂರು: ಅರಬ್ಬೀ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಪರಿಣಾಮ ರಾಜ್ಯದ ಹಲವು ಕಡೆ ಪೂರ್ವ ಮುಂಗಾರು ಮಳೆಯಾಗುತ್ತಿದ್ದು, ಇನ್ನೂ ನಾಲ್ಕು ದಿನಗಳ ಕಾಲ ಭಾರಿ ಮಳೆ ಆಗಲಿದೆ.

ಬುಧವಾರ ಚಿಕ್ಕಮಗಳೂರು, ದಕ್ಷಿಣ ಕನ್ನಡ, ಶಿವಮೊಗ್ಗ, ದಾವಣಗೆರೆ, ಕೊಪ್ಪಳ ಜಿಲ್ಲೆಯ ಹಲವು ಕಡೆ ಮಳೆಯಾಗಿದೆ. ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಹಾಸನ, ಶಿವಮೊಗ್ಗದಲ್ಲಿ ಮುಂದಿನ ನಾಲ್ಕು ದಿನ ಭಾರಿ ಮಳೆ ಬೀಳುವ ಸಾಧ್ಯತೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.

ಉತ್ತರ ಕನ್ನಡ, ದಾವಣಗೆರೆ, ಕಲಬುರಗಿ ಜಿಲ್ಲೆಯಲ್ಲಿ ಮುಂದಿನ ಎರಡು ದಿನಗಳ ಕಾಲ, ಧಾರವಾಡ, ಬೆಳಗಾವಿ, ಹಾವೇರಿ, ವಿಜಯನಗರ, ಕೊಡಗು ಜಿಲ್ಲೆಗಳಲ್ಲಿ ಮೇ 16 ರಂದು ಯೆಲ್ಲೋ ಅಲರ್ಟ್ ನೀಡಲಾಗಿದೆ. ರಾಜ್ಯದ ವಿವಿಧ ಕಡೆ ಮಳೆ ಮುಂದುವರೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular