HomeKarnatakaರಾಜ್ಯದಲ್ಲಿ ಬಿರುಗಾಳಿ ಸಹಿತ ಮಳೆ: ಅನೇಕ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ರಾಜ್ಯದಲ್ಲಿ ಬಿರುಗಾಳಿ ಸಹಿತ ಮಳೆ: ಅನೇಕ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬೆಂಗಳೂರು: ರಾಜ್ಯದ ಕೆಲವು ಭಾಗದಲ್ಲಿ ಮಂಗಳವಾರ ಬಿರುಗಾಳಿ ಸಹಿತ ಮಳೆಯಾಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಒಳನಾಡು ಜಿಲ್ಲೆಗಳಲ್ಲಿ 40 ರಿಂದ 50 ಕಿಲೋಮೀಟರ್, ಕರಾವಳಿ ಜಿಲ್ಲೆಗಳಲ್ಲಿ 30 ರಿಂದ 40 ಕಿಲೋಮೀಟರ್ ವೇಗದ ಗಾಳಿ ಬೀಸಲಿದೆ. ಗರಿಷ್ಠ ಉಷ್ಣಾಂಶ ಕೆಲವು ಕಡೆಗಳಲ್ಲಿ 2-3 ಡಿಗ್ರಿ ಸೆಲ್ಸಿಯಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯದ ದಕ್ಷಿಣ ಒಳನಾಡು ಮತ್ತು ಕರಾವಳಿ ಪ್ರದೇಶದಲ್ಲಿ ಮುಂದಿನ ಎರಡು ದಿನ ಕಾಲ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮೇ 30, 31 ಮತ್ತು ಜೂನ್ 1 ರಂದು ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಮಳೆಯಾಗಲಿದ್ದು ಉತ್ತರ ಒಳನಾಡಿನಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆ ಆಗಲಿದೆ.

ಮೇ 31 ರಂದು ಹಾಸನ, ಚಿಕ್ಕಮಗಳೂರು, ಕೊಡಗು, ಜೂನ್ 1ರಂದು ದಕ್ಷಿಣ ಕನ್ನಡ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜನಗರ, ತುಮಕೂರು, ರಾಮನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular