ಬೆಂಗಳೂರು: ರಾಜ್ಯದಲ್ಲಿ ಬುಧವಾರದಿಂದ ಮತ್ತೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮೊಂಥಾ ಚಂಡಮಾರುತದ ಬಳಿಕ ರಾಜ್ಯದಲ್ಲಿ ಮಳೆಯ ಪ್ರಮಾಣ ಕ್ಷೀಣಿಸಿದೆ. ಬಿಸಿಲ ವಾತಾವರಣ ಕಂಡು ಬಂದಿದೆ. ನವೆಂಬರ್ 5ರ ನಂತರ ಮತ್ತೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮನ್ಸೂಚನೆ ನೀಡಿದೆ.
ದೀಪಾವಳಿ ಬಳಿಕ ಮಳೆ ಪ್ರಮಾಣ ಕುಸಿತವಾಗಿದ್ದು, ಅನೇಕ ಜಿಲ್ಲೆಗಳಲ್ಲಿ ಬಿಸಿಲ ಝಳ ಹೆಚ್ಚಾಗಿದೆ. ಉತ್ತರ ಒಳನಾಡಿನ ಎಲ್ಲ ಜಿಲ್ಲೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿಯೂ ಬಿಸಿಲ ಝಳ ಹೆಚ್ಚಾಗಿದೆ. ಬದಲಾದ ಹವಾಮಾನದಿಂದಾಗಿ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಎಲ್ಲ ಜಿಲ್ಲೆಗಳಲ್ಲಿ ನವೆಂಬರ್ 5ರ ಬುಧವಾರದಿಂದ ಎರಡು ದಿನ ಮಳೆ ಆಗುವ ಸಾಧ್ಯತೆ ಇದೆ. ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಂಭವ ಇದೆ ಎಂದು ಹೇಳಲಾಗಿದೆ.
