HomeKarnatakaಮುಂದಿನ 4 ದಿನ ರಾಜ್ಯದ ವಿವಿಧೆಡೆ ಮಳೆ ಮುನ್ಸೂಚನೆ

ಮುಂದಿನ 4 ದಿನ ರಾಜ್ಯದ ವಿವಿಧೆಡೆ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ವಿವಿಧೆಡೆ ಮುಂದಿನ ನಾಲ್ಕು ದಿನ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಒಳನಾಡು, ದಕ್ಷಿಣ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮೋಡ ಮುಸುಕಿದ ವಾತಾವರಣ ಇರಲಿದ್ದು, ಮುಂದಿನ ನಾಲ್ಕು ದಿನಗಳವರೆಗೆ ಚದುರಿದಂತೆ ಮಳೆಯಾಗಲಿದೆ. ಕೆಲವು ಪ್ರದೇಶಗಳಲ್ಲಿ ಜೋರು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಒಳನಾಡಿನ ಬೀದರ್, ಕಲಬುರಗಿ, ರಾಯಚೂರು ಇತರೆ ಜಿಲ್ಲೆಗಳಲ್ಲಿ ತೀವ್ರ ಬಿಸಿಲಿನ ನಡುವೆಯೂ ಗುಡುಗು ಸಹಿತ ಹಗುರ ಮಳೆಯಾಗುವ ನಿರೀಕ್ಷೆ ಇದೆ. ಕರಾವಳಿ, ಮಲೆನಾಡು, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು ಮತ್ತು ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಂಡ್ಯ, ಚಾಮರಾಜನಗರ, ಮೈಸೂರು, ಹಾಸನ, ಕೊಡಗು, ಚಿಕ್ಕಮಗಳೂರು ಭಾಗದಲ್ಲಿ ಉತ್ತಮ ಮಳೆಯಾಗುವ ಸಂಭವ ಇದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾದ ಹಿನ್ನೆಲೆಯಲ್ಲಿ ರಾಜ್ಯದ ಕೆಲವು ಭಾಗಗಳಲ್ಲಿ ಮೋಡ ಕವಿದ ವಾತಾವರಣ ಇದ್ದು, ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆ ಇದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular