HomeKarnatakaರಾಜ್ಯದಲ್ಲಿ ಮೇ 21ರವರೆಗೆ ಮಳೆ ಮುನ್ಸೂಚನೆ: ಬೇಸಿಗೆ ಮಳೆ ಆರ್ಭಟಕ್ಕೆ 2 ದಿನದಲ್ಲಿ 6 ಜನ...

ರಾಜ್ಯದಲ್ಲಿ ಮೇ 21ರವರೆಗೆ ಮಳೆ ಮುನ್ಸೂಚನೆ: ಬೇಸಿಗೆ ಮಳೆ ಆರ್ಭಟಕ್ಕೆ 2 ದಿನದಲ್ಲಿ 6 ಜನ ಸಾವು

ಬೆಂಗಳೂರು: ರಾಜ್ಯದಲ್ಲಿ ಬೇಸಿಗೆ ಮಳೆ ಆರ್ಭಟ ಮುಂದುವರೆದಿದೆ. ಬೆಂಗಳೂರು ಸೇರಿದಂತೆ 13 ಜಿಲ್ಲೆಗಳಲ್ಲಿ ಸೋಮವಾರ ಮಳೆಯಾಗಿದ್ದು, ಸಿಡಿಲಿಗೆ ಮೂವರು ಬಲಿಯಾಗಿದ್ದಾರೆ. ಇದರೊಂದಿಗೆ ಎರಡು ದಿನದಲ್ಲಿ ಆರು ಜನ ಸಾವಿಗೀಡಾಗಿದ್ದಾರೆ.

ರಾಜ್ಯದ ಉತ್ತರ ಒಳನಾಡು, ದಕ್ಷಿಣ ಒಳನಾಡು, ಕರಾವಳಿ ಸೇರಿದಂತೆ ಬಹುತೇಕ ಭಾಗದಲ್ಲಿ ಮೇ 21ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮನ್ಸೂಚನೆ ನೀಡಿದೆ. ಧಾರವಾಡ, ಕೊಪ್ಪಳ, ವಿಜಯನಗರ, ಗದಗ, ದಾವಣಗೆರೆ, ಹಾವೇರಿ, ಶಿವಮೊಗ್ಗ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಬಳ್ಳಾರಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿತ್ರದುರ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ಮಂಡ್ಯ, ಮೈಸೂರು, ಕೋಲಾರ, ರಾಮನಗರ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಮೈಸೂರಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಲಾಗಿದೆ. ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ.

ರಾಜ್ಯದಲ್ಲಿ ಮುಂಗಾರುಪೂರ್ವ ಮಳೆಯ ಆರ್ಭಟ ಮುಂದುವರೆದಿದ್ದು, ಸೋಮವಾರ 13 ಜಿಲ್ಲೆಗಳಲ್ಲಿ ಮಳೆಯಾಗಿದೆ. ಮೂವರು ಮೃತಪಟ್ಟಿದ್ದಾರೆ. ಗದಗದ ಹೊರವಲಯದ ಒಕ್ಕಲಗೇರಿ ಓಣಿ ನಿವಾಸಿ ಕುರಿಗಾಹಿ ಮರೆತಮ್ಮಪ್ಪ(52) ಮನೆಯ ಹೊರಗೆ ಮಲಗಿದ್ದಾಗ ಸಿಡಿಲು ಪಡೆದು ಮೃತಪಟ್ಟಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಲಕ್ಷ್ಮೇಶ್ವರ ತಾಲೂಕಿನ ಶಿಗ್ಲಿ ಗ್ರಾಮದಲ್ಲಿ ಗಾಳಿ ಮಳೆಗೆ ವಿದ್ಯುತ್ ಕಂಬ ಮುರಿದು ಬಿದ್ದು ಕುರಿಗಾಹಿ ಮಂಜಪ್ಪ(26) ಮೃತಪಟ್ಟಿದ್ದಾರೆ. ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಮಲೆಕುಂಬಳೂರು ಗ್ರಾಮದ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕ ನಾಗರಾಜಪ್ಪ(54) ಸಿಟಿಲಿನ ಅಬ್ಬರಕ್ಕೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಮನೆ ಮುಂದೆ ನಿಂತು ಮಳೆ ವೀಕ್ಷಿಸುವಾಗ ಸಿಡಿಲು ಬಡಿದಿದ್ದು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ಬೆಂಗಳೂರಿನಲ್ಲಿ ಸೋಮವಾರದ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿತ್ತು. ಪ್ರಮುಖ ರಸ್ತೆಗಳು ಜಲಾವೃತಗೊಂಡು ಸಂಚಾರ ದಟ್ಟಣೆ ಉಂಟಾಗಿತ್ತು. ತಗ್ಗು ಪ್ರದೇಶಗಳು ಅಂಡರ್ ಪಾಸ್ ಗಳು ಜಲಾವೃತಗೊಂಡು ವಾಹನ ಸಂಚಾರ ಸ್ಥಗಿತಗೊಂಡಿತು.

ಹುಬ್ಬಳ್ಳಿಯಲ್ಲಿ ಭಾರಿ ಗಾಳಿ ಮಳೆ ಆರ್ಭಟಕ್ಕೆ 25ಕ್ಕೂ ಹೆಚ್ಚು ಮರಗಳು ಧರೆಗೆ ಉರುಳಿದ್ದು ಹತ್ತಕ್ಕೂ ಅಧಿಕ ಮನೆ, ಎರಡು ಕಾರು, ಐದು ಬೈಕ್ ಗಳಿಗೆ ಹಾನಿಯಾಗಿದೆ. ಬೆಳಗಾವಿ ಜಿಲ್ಲೆಯ ಹಲವೆಡೆ ಭಾರಿ ಮಳೆಯಾಗಿದೆ. ಸವದತ್ತಿ ತಾಲೂಕಿನ ಹೊಸೂರ ಸಮೀಪದ ಯಕ್ಕುಂಡಿ ಸೇತುವೆ, ಬೈಲಹೊಂಗಲ -ಮುನವಳ್ಳಿ ಸಂಪರ್ಕ ಸೇತುವೆ ಜಲಾವೃತಗೊಂಡಿದ್ದವು. ಶಿವಮೊಗ್ಗ, ಚಾಮರಾಜನಗರ, ಮಂಡ್ಯ, ಬೆಂಗಳೂರು ದಕ್ಷಿಣ, ತುಮಕೂರು ಜಿಲ್ಲೆಗಳಲ್ಲಿಯೂ ಮಳೆಯಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular