HomeLatest NewsBreaking News: ಬೆಂಗಳೂರು ನಗರದಲ್ಲಿ ಮಳೆ ಆರಂಭ

Breaking News: ಬೆಂಗಳೂರು ನಗರದಲ್ಲಿ ಮಳೆ ಆರಂಭ

ಬೆಂಗಳೂರು ನಗರದಲ್ಲಿ ಮಳೆ ಆರಂಭವಾಗಿದೆ. ಹೌದು ಸೋಮವಾರ ಸಂಜೆಯ ವೇಳೆಗೆ ಮೋಡ ಕವಿದ ವಾತಾವರಣ ಹಲವು ಪ್ರದೇಶದಲ್ಲಿದ್ದು, ನಗರದ ಕೆಲವು ಬಡಾವಣೆಗಳಲ್ಲಿ ತುಂತುರು ಮಳೆಯಾಗುತ್ತಿದೆ.

ಸೋಮವಾರ ಬೆಳಗ್ಗೆಯಿಂದಲೇ ಜೋರಾದ ಗಾಳಿ, ಮೋಡ ಕವಿದ ವಾತಾವರಣ ನಗರದಲ್ಲಿತ್ತು. ಮಧ್ಯಾಹ್ನ 3.45ರ ಸುಮಾರಿಗೆ ನಗರದ ಹಲವು ಬಡಾವಣೆಗಳಲ್ಲಿ ತುಂತುರು ಮಳೆಯಾಗಿದೆ.

ನಗರದಲ್ಲಿ ಭಾರೀ ಮೋಡ ಕವಿದಿದ್ದು, ಸಂಜೆ ಇನ್ನೂ ಹೆಚ್ಚಿನ ಮಳೆ ನಿರೀಕ್ಷೆ ಮಾಡಲಾಗಿದೆ. ಭಾನುವಾರದಿಂದ ನಗರ ಹವಾಮಾನ ಬದಲಾವಣೆಯಾಗಿದ್ದು, ರಾತ್ರಿ ಮತ್ತು ಮುಂಜಾನೆ ಚಳಿ ಇದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸೋಮವಾರ ಮಧ್ಯಾಹ್ನ ವಿದ್ಯಾಪೀಠ ವೃತ್ತ, ಕತ್ರಿಗುಪ್ಪೆ, ಬ್ಯಾಂಕ್ ಕಾಲೋನಿ, ಜಯನಗರ ಸೇರಿದಂತೆ ನಗರದ ವಿವಿಧ ಬಡಾವಣೆಗಳಲ್ಲಿ ತುಂತುರು ಮಳೆಯಾಗುತ್ತಿದೆ.

ಹಲವು ಕಡೆ ಮೋಡ ಕವಿದ ವಾತಾವರಣವಿದೆ ಎಂದು ಜನರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕುತ್ತಿದ್ದಾರೆ. ಸಂಜೆ ಇನ್ನಷ್ಟು ಮಳೆ ಸುರಿಯುವ ನಿರೀಕ್ಷೆ ಇದ್ದು, ಜನರು ಹೊರಗೆ ಹೋಗುವಾಗ ಎಚ್ಚರ ವಹಿಸುವುದು ಅಗತ್ಯವಾಗಿದೆ.

ಚಂಡಮಾರುತ: ಬಂಗಾಲಕೊಲ್ಲಿಯಲ್ಲಿ ಉಂಟಾಗಿರುವ ಚಂಡಮಾರುತದ ಪರಿಣಾಮ ಬೆಂಗಳೂರು ನಗರದಲ್ಲಿ ಮಳೆಯಾಗುತ್ತಿದೆ. ರಾಜ್ಯದ 8 ಜಿಲ್ಲೆಗಳಲ್ಲಿ ಇಂದು ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿತ್ತು.

ಸೋಮವಾರ ಬೆಂಗಳೂರು ನಗರ, ಮೈಸೂರು , ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಚಾಮರಾಜನಗರ ಸೇರಿ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ಬೆಂಗಳೂರು ನಗರದಲ್ಲಿ ತಾಪಮಾನ 23 ಡಿಗ್ರಿ ಸೆಲ್ಸಿಯಸ್‌ಗೆ ಇಳಿಕೆಯಾಗಿದೆ.

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ರಾಜ್ಯದ ಮುಂದಿನ 7 ದಿನಗಳ ಹವಾಮಾನ ಮುನ್ಸೂಚನೆ ನೀಡಿದ್ದು, ರಾಜ್ಯದಾದ್ಯಂತ ಒಣ ಹವೆ ಮುಂದುವರಿಯುವ ಸಾಧ್ಯತೆಯಿದ್ದು, ಚಳಿ ಹಾಗೂ ಅಲ್ಲಲ್ಲಿ ಮುಂಜಾನೆ ಮಂಜಿನ ವಾತಾವರಣ ಇರುವ ಸಾಧ್ಯತೆಯಿದೆ ಎಂದು ಹೇಳಿದೆ.

ದಕ್ಷಿಣ ಒಳನಾಡು, ಕರಾವಳಿ & ಮಲೆನಾಡು ಭಾಗಗಳಲ್ಲಿ ಇಂದು ಅಲ್ಲಲ್ಲಿ ತುಂತುರು ಮಳೆಯಾಗುವ ಮುನ್ಸೂಚನೆ ಇದೆ ಎಂದು ತಿಳಿಸಿದೆ. ಸೋಮವಾರ ಒಣ ಹವೆ ಮುಂದುವರಿಯುವ ಸಾಧ್ಯತೆಯಿದ್ದು, ಚಳಿ ಹಾಗೂ ಅಲ್ಲಲ್ಲಿ ಮುಂಜಾನೆ ಮಂಜಿನ ವಾತಾವರಣ ಇರುವ ಸಾಧ್ಯತೆಯಿದೆ ಹಾಗೂ ದಕ್ಷಿಣ ಒಳನಾಡು, ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯಾಗುವ ಮುನ್ಸೂಚನೆ ಇದೆ ಎಂದು ಹೇಳಿತ್ತು.

ಜನರಿಗೆ ಎಚ್ಚರಿಕೆಯಿಂ ಇರಲು ಸೂಚನೆ: ಬೆಂಗಳೂರು ನಗರದಲ್ಲಿ ಹವಾಮಾನ ಏರುಪೇರಾಗುತ್ತಿದೆ. ನಗರದಲ್ಲಿ ಎಂದಿನಂತೆ ಚಳಿಯ ಜೊತೆಗೆ ಮಂಜು ಮುಸುಕಿದ ವಾತಾವರಣವಿದೆ.

ಇದರಿಂದಾಗಿ ಮಕ್ಕಳು, ವೃದ್ಧರು ಎಚ್ಚರಿಕೆಯಿಂದ ಇರುವಂತೆ ಸಲಹೆ ನೀಡಲಾಗಿದೆ. ಬೆಚ್ಚನೆಯ ಉಡುಪು ಧರಿಸಬೇಕು. ಸಮತೋಲನ ಬಿಸಿ ಆಹಾರ ಸೇವಿಸಬೇಕು ಎಂದು ಸೂಚಿಸಲಾಗಿದೆ.

ಬೆಂಗಳೂರು ನಗರದಲ್ಲಿ  ಕನಿಷ್ಠ ಉಷ್ಣಾಂಶ 17 ಡಿಗ್ರಿ ಸೆಲ್ಸಿಯಸ್ ಇದ್ದು, ಗರಿಷ್ಠ 30 ಡಿಗ್ರಿ ಸೆಲ್ಸಿಯಸ್ ತನಕ ತಾಪಮಾನ ದಾಖಲಾಗಿದೆ ಎಂದು ಅಂದಾಜಿಸಲಾಗಿದೆ. ಈ ರೀತಿಯ ತೀವ್ರ ಚಳಿಯಿಂದ ಜನರ ಆರೋಗ್ಯದಲ್ಲಿ ಏರುಪೇರಾಗುತ್ತಿದೆ.

ಮುಂಜಾನೆ ತಾಪಮಾನ ಕಡಿಮೆ ಇರುವ ಕಾರಣಕ್ಕೆ ವೃದ್ಧರು ವಾಯುವಿಹಾರಕ್ಕೆ ಹೋಗವಾಗ ಜಾಗೃತೆ ವಹಿಸಬೇಕು. ಬೆಚ್ಚಗಿನ ಉಡುಪು ಧರಿಸಬೇಕು ಎಂದು ತಿಳಿಸಿದೆ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

Most Popular