HomeKarnatakaRain in Karnataka : 'ಮಳೆ' ನಿರೀಕ್ಷೆಯಲ್ಲಿರುವ ರಾಜ್ಯದ ರೈತರಿಗೆ ಹವಾಮಾನ ಇಲಾಖೆಯಿಂದ ಗುಡ್ ನ್ಯೂಸ್

Rain in Karnataka : ‘ಮಳೆ’ ನಿರೀಕ್ಷೆಯಲ್ಲಿರುವ ರಾಜ್ಯದ ರೈತರಿಗೆ ಹವಾಮಾನ ಇಲಾಖೆಯಿಂದ ಗುಡ್ ನ್ಯೂಸ್

ಬೆಂಗಳೂರು : ಮಳೆ ನಿರೀಕ್ಷೆಯಲ್ಲಿರುವ ರಾಜ್ಯದ ರೈತರಿಗೆ ಹವಾಮಾನ ಇಲಾಖೆ ಗುಡ್ ನ್ಯೂಸ್ ನೀಡಿದ್ದು, ಅಕ್ಟೋಬರ್ 10 ರವರೆಗೆ ರಾಜ್ಯದ ಹಲವು ಕಡೆ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.

ಕಲಬುರಗಿ, ಶಿವಮೊಗ್ಗ, ಚಿಕ್ಕಮಗಳೂರು, ಬಾಗಲಕೋಟೆ, ಯಾದಗಿರಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಹಾಗೂ ಕೊಡಗು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಬೀದರ್, ಬೆಳಗಾವಿ ಕೊಪ್ಪಳ, ಬೆಂಗಳೂರು ಗ್ರಾಮಾಂತರ, ವಿಜಯನಗರ, ರಾಮನಗರ, ಬೆಂಗಳೂರು ನಗರ, ಗದಗ, ತುಮಕೂರು, ಚಿಕ್ಕಬಳ್ಳಾಪುರ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಕೂಡ ಮಳೆಯಾಗಲಿದೆ.

ಅದೇ ರೀತಿ ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ವ್ಯಾಪಕ ಮಳೆ ಮುಂದುವರೆಯುವ ಸಾಧ್ಯತೆ ಇದ್ದು, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಕೂಡ ಉತ್ತಮ ಮಳೆಯಾಗಲಿದೆ ಎಂದು ಹೇಳಾಗಿದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಕೂಡ ಗುಡುಗು ಮಿಂಚು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular