HomeKarnatakaRain In Karnataka : ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ :...

Rain In Karnataka : ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ : ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು : ಉತ್ತರ ಒಳನಾಡು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇಂದು ಉತ್ತರ ಒಳನಾಡಿನ ಬೀದರ್, ವಿಜಯಪುರ, ಕಲಬುರ್ಗಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿ, ಬಳ್ಳಾರಿ, ವಿಜಯನಗರದಲ್ಲಿ ಮಳೆಯಾಗಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕರಾವಳಿಯ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular