HomeKarnatakaRain In Karnataka : ರಾಜ್ಯದ ಈ ಜಿಲ್ಲೆಗಳಲ್ಲಿ ಮೂರು ದಿನ ಮಳೆ : ಹವಾಮಾನ...

Rain In Karnataka : ರಾಜ್ಯದ ಈ ಜಿಲ್ಲೆಗಳಲ್ಲಿ ಮೂರು ದಿನ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು : ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಪರಿಣಾಮ ರಾಜ್ಯದ ಕರಾವಳಿ ಜಿಲ್ಲೆಗಳು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮೂರು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳು ಸೇರಿದಂತೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಹಾಸನ, ಮಂಡ್ಯ, ಮೈಸೂರು,ಚಿಕ್ಕಮಗಳೂರು, ಕೊಡಗು ಶಿವಮಗೊಗ ಜಿಲ್ಲೆಗಳಲ್ಲಿ ಡಿಸೆಂಬರ್‌ 17 ರ ಇಂದಿನಿಂದ ಡಿಸೆಂಬರ್ 19ರವರೆಗೆ‌ ಮಳೆಯಾಗುವ ಸಾಧ್ಯತೆ ಇದೆ.  ರಾಯಚೂರು, ವಿಜಯಪುರ, ಬಾಗಲಕೋಟೆ, ಕಲಬುರಗಿ, ಯಾದಗಿರಿ, ಕೊಪ್ಪಳ ಜಿಲ್ಲೆಗಳಲ್ಲಿ ನಾಳೆಯಿಂದ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

For Latest News Updates, Join Our Whatsapp Community🚩
RELATED ARTICLES

Most Popular