HomeLatest NewsRain alert Karnataka : 'ಸೈಕ್ಲೋನ್ ಎಫೆಕ್ಟ್' :  ರಾಜ್ಯದ ಈ ಜಿಲ್ಲೆಗಳಲ್ಲಿ ಇಂದಿನಿಂದ 3-4...

Rain alert Karnataka : ‘ಸೈಕ್ಲೋನ್ ಎಫೆಕ್ಟ್’ :  ರಾಜ್ಯದ ಈ ಜಿಲ್ಲೆಗಳಲ್ಲಿ ಇಂದಿನಿಂದ 3-4 ದಿನ ಬಿರುಗಾಳಿ ಸಹಿತ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು : ರಾಜ್ಯದ ಈ ಜಿಲ್ಲೆಗಳಲ್ಲಿ ಇಂದಿನಿಂದ ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಹಿನ್ನೆಲೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ವಿಜಯನಗರ, ತುಮಕೂರು, ಶಿವಮೊಗ್ಗ, ಹಾಸನ, ಚಿತ್ರದುರ್ಗ, ಚಿಕ್ಕಮಗಳೂರು, ಬಳ್ಳಾರಿ. ಹಾವೇರಿ, ತುಮಕೂರು, ವಿಜಯನಗರ, ಧಾರವಾಡ, ಬೀದರ್. ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡದಲ್ಲಿ ಭಾರಿ ಮಳೆಯಾಗಲಿದೆ.ಏ.5 ರಂದು ದಕ್ಷಿಣ ಕರ್ನಾಟಕದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಮೈಸೂರು ಜಿಲ್ಲೆಗಳಲ್ಲಿ ಗಂಟೆಗೆ 30-40 ಕಿಮೀ ವೇಗದಲ್ಲಿ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ. ಅದೇ ರೀತಿ ಕರಾವಳಿ ಪ್ರದೇಶಗಳಾದ ಉಡುಪಿ ಮತ್ತು ದಕ್ಷಿಣ ಕನ್ನಡದಲ್ಲಿ ಸಾಧಾರಣ ಮಳೆಯಾಗಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಏಪ್ರಿಲ್ 6 ರಂದು ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಬಿರುಗಾಳಿ ಸಹಿತ ಮಳೆಯಾಗಲಿದೆ. ಹಾಗೂ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ. ದಾವಣಗೆರೆ, ಕೋಲಾರ, ರಾಮನಗರ, ಮಂಡ್ಯ ಜಿಲ್ಲೆಗಳಲ್ಲಿ ಕೂಡ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಳೆದ ಕೆಲವು ದಿನಗಳಿಂದ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭರ್ಜರಿ ಮಳೆಯಾಗಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular