HomeKarnatakaRain in Karnataka : ರಾಜ್ಯದಲ್ಲಿ ಮುಂದಿನ 5 ದಿನ ಭಾರೀ ಮಳೆ : ಹಲವು...

Rain in Karnataka : ರಾಜ್ಯದಲ್ಲಿ ಮುಂದಿನ 5 ದಿನ ಭಾರೀ ಮಳೆ : ಹಲವು ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ

ಬೆಂಗಳೂರು : ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 5 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜಧಾನಿ ಬೆಂಗಳೂರು, ರಾಮನಗರ, ಮಂಡ್ಯ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಕಳೆದ ಎರಡು ದಿನಗಳಿಂದ ಮಳೆಯಾಗುತ್ತಿದ್ದು, ನವೆಂಬರ್ 10 ರವರೆಗೆ ರಾಜ್ಯದಲ್ಲಿ ಮಳೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ  ಇಲಾಖೆ ಮಾಹಿತಿ ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇಂದಿನಿಂದ ನವೆಂಬರ್ 10 ರವರೆಗೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಾಮರಾಜನಗರ,  ದಾವಣಗೆರೆ, ಕೋಲಾರ,  ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ   ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular