HomeKarnatakaRain In Karnataka : ರಾಜ್ಯದಲ್ಲಿ 2 ದಿನ ಭಾರೀ ಮಳೆ : ಈ ಜಿಲ್ಲೆಗಳಿಗೆ...

Rain In Karnataka : ರಾಜ್ಯದಲ್ಲಿ 2 ದಿನ ಭಾರೀ ಮಳೆ : ಈ ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ

ಬೆಂಗಳೂರು : ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ನವೆಂಬರ್ 23 ರಿಂದ ನವೆಂಬರ್ 25 ರವರೆಗೆ ರಾಜ್ಯದ ಕರಾವಳಿ, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನವೆಂಬರ್ 23 ರಂದು ಕೊಡಗು, ಮೈಸೂರು, ಚಾಮರಾಜನಗರ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಹಾಸನ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ನ. 24 ರಂದು ಕರಾವಳಿಯ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular