HomeKarnatakaHeavy Rain : ಕೊಡಗು ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ನಾಳೆಯೂ ರಜೆ ಘೋಷಣೆ : ಜಿಲ್ಲಾಧಿಕಾರಿ ಆದೇಶ

Heavy Rain : ಕೊಡಗು ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ನಾಳೆಯೂ ರಜೆ ಘೋಷಣೆ : ಜಿಲ್ಲಾಧಿಕಾರಿ ಆದೇಶ

ಬೆಂಗಳೂರು : ರಾಜ್ಯದ ಹಲವಡೆ ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ವಿವಿಧ ಜಿಲ್ಲೆಗಳಲ್ಲಿ ಅಂಗನವಾಡಿ, ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಕೊಡಗು ಜಿಲ್ಲೆಯಲ್ಲಿ ಕೂಡ ವರುಣಾರ್ಭಟ ಮುಂದುವರೆದಿದ್ದು,  ಜಿಲ್ಲೆಯಾದ್ಯಂತ ನಾಳೆವರೆಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಕೊಡಗು ಜಿಲ್ಲೆಯಲ್ಲಿ ವರುಣನ ಆರ್ಭಟ ಜೋರಾಗಿದ್ದು, ನಾಳೆಯೂ (ಜುಲೈ 25)   ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಅಂಗನವಾಡಿ, ಶಾಲಾ ಕಾಲೇಜುಗಳಿಗೆ  ರಜೆ ಘೋಷಣೆ ಮಾಡಿ ಕೊಡಗು ಜಿಲ್ಲಾಧಿಕಾರಿ ವೆಂಕಟ್ ರಾಜಾ ಆದೇಶ ಹೊರಡಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯದಲ್ಲಿ ಇಂದು ಮತ್ತು ನಾಳೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಈ ನಡುವೆ ಸತತ ಮಳೆಯಿಂದಾಗಿ ಹಲವು ನದಿಗಳು ತುಂಬಿ ಹರಿಯುತ್ತಿದ್ದು, ಸೇತುವೆಗಳು ಜಲಾವೃತವಾಗಿವೆ. ರಾಜ್ಯದ ವಿವಿಧೆಡೆ ಭಾರಿ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ವಿವಿಧ ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ನೀಡಲಾಗಿದೆ.

ರಾಜ್ಯದಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರೆದಿದ್ದು, ಮುಂದಿನ 24 ಗಂಟೆಗಳಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಹಾಗೂ ಮೂರು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular