HomeKarnatakaRain Alert Karnataka : ರಾಜ್ಯದಲ್ಲಿ ಆ.28 ರವರೆಗೂ 'ಮಳೆ' : ಈ ಜಿಲ್ಲೆಗಳಿಗೆ 'ಯೆಲ್ಲೋ...

Rain Alert Karnataka : ರಾಜ್ಯದಲ್ಲಿ ಆ.28 ರವರೆಗೂ ‘ಮಳೆ’ : ಈ ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಣೆ..!

ಬೆಂಗಳೂರು : ರಾಜ್ಯದಲ್ಲಿ ಆ.28 ರವರೆಗೂ ಭಾರಿ ಮಳೆಯಾಗಲಿದ್ದು, ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಬೆಂಗಳೂರಿನಲ್ಲೂ ಭಾರೀ ಮಳೆಯಾಗುತ್ತಿದೆ.ಇಂದು ಕರಾವಳಿಯ ಬಹುತೇಕ ಸ್ಥಳಗಳಲ್ಲಿ ಮತ್ತು ಒಳನಾಡಿನ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 28ರವರೆಗೂ ಧಾರಾಕಾರ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಆಗಸ್ಟ್ 25 ಹಾಗೂ 26 ರಂದು ಉಡುಪಿ ಹಾಗೂ ಉತ್ತರ ಕನ್ನಡಕ್ಕೆ ಆರೆಂಜ್ ಅಲರ್ಟ್ ಘೋಷಿರುವ ಹಿನ್ನೆಲೆ ಅತಿ ಭಾರೀ ಮಳೆಯಾಗುವ ಮುನ್ನೆಚ್ಚರಿಕೆ ನೀಡಲಾಗಿದೆ. ಬೆಳಗಾವಿ, ಬೀದರ್, ಬಾಗಲಕೋಟೆ, ವಿಜಯಪುರ, ಯಾದಗಿರಿ, ಚಿಕ್ಕಮಗಳೂರು, ಹಾಸನ ಹಾಗೂ ಶಿವಮೊಗ್ಗದಲ್ಲಿ ಈ ವಾರ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆಗಸ್ಟ್ 25 ರಿಂದ ಕರಾವಳಿ ಭಾಗದ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular