HomeLatest NewsRAIN ALERT: ರಾಜ್ಯದಲ್ಲಿ ಮುಂದುವರೆದ ಮಳೆಯ ಅಬ್ಬರ: 7 ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ

RAIN ALERT: ರಾಜ್ಯದಲ್ಲಿ ಮುಂದುವರೆದ ಮಳೆಯ ಅಬ್ಬರ: 7 ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಅಬ್ಬರ ಮುಂದುವರೆದಿದೆ. ಕರಾವಳಿ, ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಒಂದು ವಾರಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹಾವಾಮನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಜಿಲ್ಲೆಗಳು ಸೇರಿದಂತೆ ಏಳು ಜಿಲ್ಲೆಗಳಲ್ಲಿ ಆಗಸ್ಟ್ 2ರವರೆಗೆ ಧಾರಾಕಾರ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಹಾಸನ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗಲಿದೆ. ಈ ಜಿಲ್ಲೆಗಳಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಆರೇಂಜ್ ಅಲರ್ಟ್ ಘೋಷಿಸಲಾಗಿದೆ.

ಮೈಸೂರು, ಚಾಮರಾಜನಗರ, ಹಾವೇರಿ, ಬೆಳಗಾವಿ ಜಿಲ್ಲೆಗಳಲ್ಲಿಯೂ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಧಾರವಾಡ, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular