HomeLatest NewsRAIN ALERT: 'ದಿತ್ವ ಚಂಡಮಾರುತ'ದ ಎಫೆಕ್ಟ್: ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಮಳೆ ಮುನ್ಸೂಚನೆ

RAIN ALERT: ‘ದಿತ್ವ ಚಂಡಮಾರುತ’ದ ಎಫೆಕ್ಟ್: ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಮಳೆ ಮುನ್ಸೂಚನೆ

ಬೆಂಗಳೂರು: ದಿತ್ವ ಚಂಡಮಾರುತ ಹಿನ್ನೆಲೆಯಲ್ಲಿ ಕರ್ನಾಟಕ, ಆಂಢ್ರಪ್ರದೇಶ, ತಮಿಳುನಾಡು, ಕೇರಳ ರಾಜ್ಯಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಮೈಕೊರೆವ ಚಳಿ ಪ್ರಮಣವೂ ಹೆಚ್ಚಲಿದೆ ಎಂದು ತಿಳಿಸಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮುಂಜಾನೆಯಿಂದಲೇ ತುಂತುರು ಮಳೆ ಆರಂಭವಾಗಿದ್ದು, ಮೈ ನಡುವಷ್ಟು ಚಳಿ ಹೆಚ್ಚಳವಾಗಿದೆ.

ಡಿಸೆಂಬರ್ ನಾಲ್ಕರವರೆಗೂ ರಾಜ್ಯದಲ್ಲಿ ಮಳೆಯಾಗಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿವಿಧ ಜಿಲ್ಲೆಗಳಲ್ಲಿ 2-3 ದಿನಗಳ ಕಾಲ ಮೋಡಕವಿದ ವಾತಾವರಣ, ಚಳಿ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

For Latest News Updates, Join Our Whatsapp Community🚩
RELATED ARTICLES

Most Popular