ಮಡಿಕೇರಿ: ರಾಜ್ಯದ ಹಲವು ಜಿಲ್ಲೆಗಳಲ್ಲಿ ವರುಣಾರ್ಭಟ ಮುಂದುವರೆದಿದೆ. ಕೊಡಗು ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದ್ದು. ನಾಳೆಯೂ ಮಳೆ ಅಬ್ಬರ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಜೋರು ಮಳೆ ಹಿನ್ನೆಲೆಯಲ್ಲಿ ಇಂದು ಕೊಡಗು ಜಿಲ್ಲೆಯಾದ್ಯಂತ ಆರೇಂಜ್ ಅಲರ್ಟ್ ಘೋಷಿಸಲಾಗಿತ್ತು. ನಾಳೆಯೂ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ನಾಳೆಯೂ ಆರೇಂಜ್ ಅಲರ್ಟ್ ಘೋಷಿಸಲಾಗಿದೆ.
ಇನ್ನು ರಾಜ್ಯದ 14 ಜಿಲ್ಲೆಗಳಲ್ಲಿ ಜುಲೈ 22ರವರೆಗೆ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು, ಬೆಳಗಾವಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ. ಶಿವಮೊಗ್ಗ, ಮಂಡ್ಯ, ಮೈಸೂರು, ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.