HomeLatest NewsBIG NEWS: ಕೃಷ್ಣಾ ನದಿಯಲ್ಲಿ ಏಕಾಏಕಿ ನೀರು ಹೆಚ್ಚಳ: ಕುಡುಚಿ ಸೇತುವೆ, ಹೆದ್ದಾರಿ ಮುಳುಗಡೆ; ರಸ್ತೆ...

BIG NEWS: ಕೃಷ್ಣಾ ನದಿಯಲ್ಲಿ ಏಕಾಏಕಿ ನೀರು ಹೆಚ್ಚಳ: ಕುಡುಚಿ ಸೇತುವೆ, ಹೆದ್ದಾರಿ ಮುಳುಗಡೆ; ರಸ್ತೆ ಮಾರ್ಗ ಸಂಪೂರ್ಣ ಬಂದ್

ಬೆಳಗಾವಿ: ಪಶ್ಚಿಮ ಘಟ್ಟ, ಮಹಾರಾಷ್ಟ್ರ ಭಾಗದಲ್ಲಿ ಧಾರಾಕರ ಮಳೆಯಾಗುತ್ತಿದ್ದು, ಕೃಷ್ಣ ನದಿಯಲ್ಲಿ ಏಕಾಏಕಿ ನೀರಿನ ಹರಿವು ಹೆಚ್ಚಾಗಿದೆ. ಇದರಿಂದಾಗಿ ಹಲವೆಡೆ ಪ್ರವಾಹ ಭೀತಿ ಎದುರಾಗಿದೆ. ವಿವಿಧ ಸೇತುವೆ, ಹೆದ್ದಾರಿ ಮುಳುಗಡೆಯಾಗಿದ್ದು, ಸಂಚಾರ ಬಂದ್ ಆಗಿದೆ.

ಕೃಷ್ಣಾ ನದಿಯಲ್ಲಿ 1,40,000 ಕ್ಯೂಸೆಕ್ ನಷ್ಟು ಒಳ ಹರಿವು ಹೆಚ್ಚಾಗಿದೆ. ಇದರಿಂದಾಗಿ ಬಾಗಲಕೋಟೆ, ಮಹಾಲಿಂಗಪುರ, ಉಗಾರ, ಕುಡುಚಿ ಮಹಾರಾಷ್ಟ್ರದ ಮೀರಜ್ ಸಂಪರ್ಕಿಸುವ ರಾಜ್ಯ ಹೆದ್ದಾರಿ, ಸೇತುವೆ ಮುಳುಗಡೆಯಾಗಿದೆ. ರಸ್ತೆ ಮಾರ್ಗಗಳನ್ನು ಬಂದ್ ಮಾಡಲಾಗಿದೆ.

ಮಹಾರಾಷ್ಟ್ರ ಸಂಪರ್ಕಿಸುವ ಮಾರ್ಗ ಬಂದ್ ಆಗಿರುವುದರಿಂದ ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಉಪವಿಭಾಗ ಭಾಗದಲ್ಲಿ ಕಳೆದ ಮೂರು ದಿನಗಳಲ್ಲಿ 10 ಸಂಪರ್ಕ ಸೇತುವೆಗಳು ಮುಳುಗಡೆಯಾಗಿವೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಹಾರಾಷ್ಟ್ರ, ಪಶ್ಚಿಮ ಘಟ್ಟ ಭಾಗದಲ್ಲಿ ಭಾರಿ ಮಳೆಯಾಗುತ್ತಿರುವ ಕಾರಣ ಕೃಷ್ಣ ಹಾಗೂ ದೂಧಗಂಗಾ ನದಿಯಲ್ಲಿ ಪ್ರವಾಹದ ಆತಂಕ ಎದುರಾಗಿದೆ. ನದಿ ತೀರದ ಜನರಿಗೆ ಜಿಲ್ಲಾಡಳಿತ ಕಟ್ಟೆಚ್ಚರ ಘೋಷಿಸಿದೆ.

For Latest News Updates, Join Our Whatsapp Community🚩
RELATED ARTICLES

Most Popular