HomeKarnatakaಶಿರಾಡಿ ಘಾಟ್ ಮೂಲಕ ಸಂಚರಿಸುವವರ ಗಮನಕ್ಕೆ: ಎಲ್ಲಾ ವಾಹನ ಸಂಚಾರ ನಿರ್ಬಂಧ

ಶಿರಾಡಿ ಘಾಟ್ ಮೂಲಕ ಸಂಚರಿಸುವವರ ಗಮನಕ್ಕೆ: ಎಲ್ಲಾ ವಾಹನ ಸಂಚಾರ ನಿರ್ಬಂಧ

ಹಾಸನ: ನಿರಂತರ ಮಳೆಯಿಂದಾಗಿ ಭೂಕುಸಿತವಾಗುತ್ತಿರುವ ಕಾರಣ ಶಿರಾಡಿ ಘಾಟ್ ನಲ್ಲಿ ಸಂಚಾರ ನಿರ್ಬಂಧಿಸಲಾಗಿದೆ.

ಬೆಂಗಳೂರು – ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಹಾಸನದಿಂದ ಮಾರನಹಳ್ಳಿಯವರೆಗೆ ಎಲ್ಲಾ ರೀತಿಯ ವಾಹನಗಳ ಸಂಚಾರ ನಿರ್ಬಂಧಿಸಿ ಜಿಲ್ಲಾಧಿಕಾರಿ ಸಿ. ಸತ್ಯಭಾಮಾ ಆದೇಶಿಸಿದ್ದಾರೆ.

ಬೆಂಗಳೂರು -ಮಂಗಳೂರು ಹೆದ್ದಾರಿಯ ಹಾಸನದಿಂದ ಮಾರನಹಳ್ಳಿಯವರೆಗಿನ ರಸ್ತೆಯಲ್ಲಿ ಅಹಿತಕರ ಘಟನೆಗಳು ನಡೆಯದಂತೆ ತಡೆಯುವ ಸಲುವಾಗಿ, ಸಾರ್ವಜನಿಕರ ಹಿತದೃಷ್ಟಿಯಿಂದ ಮುನ್ನೆಚ್ಚರಿಕೆ ಕ್ರಮವಾಗಿ ಜುಲೈ 18ರಿಂದ ದುರಸ್ತಿ ಕಾರ್ಯ ಪೂರ್ಣಗೊಳ್ಳುವವರೆಗೆ ಎಲ್ಲಾ ರೀತಿಯ ವಾಹನ ಸಂಚಾರ ನಿರ್ಬಂಧಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular