HomeKarnatakaರಾಜ್ಯದಲ್ಲಿ ಪೂರ್ವ ಮುಂಗಾರು ಚುರುಕು: ಮೂರು ದಿನ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಮಳೆ

ರಾಜ್ಯದಲ್ಲಿ ಪೂರ್ವ ಮುಂಗಾರು ಚುರುಕು: ಮೂರು ದಿನ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಮಳೆ

ಬೆಂಗಳೂರು: ರಾಜ್ಯದಲ್ಲಿ ಪೂರ್ವ ಮುಂಗಾರು ಚುರುಕಾಗಲಿದ್ದು, ಮುಂದಿನ ಮೂರು ದಿನ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಏಪ್ರಿಲ್ 18ರಂದು ಕರಾವಳಿ ಜಿಲ್ಲೆಗಳನ್ನು ಹೊರತುಪಡಿಸಿ ಉತ್ತರ ಮತ್ತು ದಕ್ಷಿಣ ಒಳನಾಡಿನ ಅನೇಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಕಲಬುರಗಿ, ಕೊಪ್ಪಳ, ವಿಜಯಪುರ, ಯಾದಗಿರಿ, ರಾಯಚೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಚಾಮರಾಜನಗರ, ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಮೈಸೂರು, ಮಂಡ್ಯ, ಕೊಡಗು, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಅತಿ ಸಾಧಾರಣ ಮಳೆಯಾಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಏಪ್ರಿಲ್ 19 ರಂದು ದಕ್ಷಿಣ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬೆಂಗಳೂರು, ಬಳ್ಳಾರಿ, ವಿಜಯಪುರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಶಿವಮೊಗ್ಗ, ತುಮಕೂರು, ವಿಜಯನಗರ, ಚಿತ್ರದುರ್ಗ, ರಾಮನಗರ, ಮೈಸೂರು, ಮಂಡ್ಯ, ಕೊಡಗು ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಏಪ್ರಿಲ್ 20 ರಂದು ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬೀದರ್, ಕಲಬುರಗಿ, ಗದಗ, ರಾಯಚೂರು, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ, ತುಮಕೂರು, ವಿಜಯನಗರ, ಮಂಡ್ಯ, ಮೈಸೂರು, ಕೋಲಾರ, ಕೊಡಗು, ಹಾಸನದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular