HomeAgricultureಬರದಿಂದ ಕಂಗಾಲಾಗಿದ್ದ ರೈತರಿಗೆ ಗುಡ್ ನ್ಯೂಸ್: ಈ ವರ್ಷ ಉತ್ತಮ ಮುಂಗಾರು, ವಾಡಿಕೆ ಮಳೆ

ಬರದಿಂದ ಕಂಗಾಲಾಗಿದ್ದ ರೈತರಿಗೆ ಗುಡ್ ನ್ಯೂಸ್: ಈ ವರ್ಷ ಉತ್ತಮ ಮುಂಗಾರು, ವಾಡಿಕೆ ಮಳೆ

ಬೆಂಗಳೂರು: ರಾಜ್ಯದಲ್ಲಿ ಕಳೆದ ವರ್ಷ ವಾಡಿಕೆಗಿಂತ ಕಡಿಮೆ ಮಳೆಯಾಗಿ ಬರ ಪರಿಸ್ಥಿತಿ ಎದುರಾಗಿದೆ. ಈ ವರ್ಷ ವಾಡಿಕೆಯಷ್ಟು ಮಳೆಯಾಗಲಿದೆ ಎಂದು ಹೇಳಲಾಗಿದೆ.

2023ರಲ್ಲಿ ಎಲ್ ನೀನೋ(ಸಮುದ್ರದಲ್ಲಿ ತಾಪಮಾನ ಹೆಚ್ಚಳ) ಪ್ರಭಾವದ ಕಾರಣ ಮಳೆ ಭಾರಿ ಕುಂಠಿತವಾಗಿತ್ತು. ಈ ವರ್ಷದ ಮಾರ್ಚ್ ವೇಳೆಗೆ ಎಲ್ ನೀನೋ ಪ್ರಭಾವ ಕಡಿಮೆಯಾಗಲಿದೆ. ಇದರಿಂದ ಉತ್ತಮ ಮುಂಗಾರು ಮಳೆಯಾಗುವ ಸಾಧ್ಯತೆ ಇದೆ. ವಾಡಿಕೆಯಷ್ಟು ಮಳೆ ಆಗುವುದರಲ್ಲಿ ಯಾವುದೇ ಆತಂಕ ಇಲ್ಲ ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಾರ್ಚ್ ವೇಳೆಗೆ ಮಳೆಯ ಕುರಿತಾದ ಇನ್ನಷ್ಟು ನಿಖರ ಮಾಹಿತಿ ಲಭ್ಯವಾಗಲಿದೆ ಎಂದು ಹವಾಮಾನ ತಜ್ಞ ಶ್ರೀನಿವಾಸ ರೆಡ್ಡಿ ತಿಳಿಸಿದ್ದಾರೆ. 2023ರ ಜನವರಿ 1ರಿಂದ ಡಿಸೆಂಬರ್ 31ರವರೆಗೆ ರಾಜ್ಯದಲ್ಲಿ ವಾಡಿಕೆಯ ಪ್ರಕಾರ 1153 ಮಿಲಿ ಮೀಟರ್ ಮಳೆಯಾಗಬೇಕಿತ್ತು. ಆದರೆ, ಕೇವಲ 872 ಮಿಲಿ ಮೀಟರ್ ಮಳೆಯಾಗಿದ್ದು, 19 ಜಿಲ್ಲೆಗಳಲ್ಲಿ ಮಳೆ ಕೊರತೆಯಾಗಿದೆ. ಅತಿ ಹೆಚ್ಚು ಮಳೆಯಾಗುವ ಕರಾವಳಿಯಲ್ಲಿ ಶೇಕಡ 19 ರಷ್ಟು, ಮಲೆನಾಡು ಭಾಗದ ಜಿಲ್ಲೆಗಳಲ್ಲಿ 35ರಷ್ಟು ಮಳೆ ಕೊರತೆ ಕಂಡು ಬಂದಿದೆ. ಜನವರಿ 2ರಿಂದ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular