HomeKarnatakaವಾಡಿಕೆಗಿಂತ 4 ದಿನ ಮೊದಲೇ ಇಡೀ ರಾಜ್ಯ ವ್ಯಾಪಿಸಿದ ಮುಂಗಾರು

ವಾಡಿಕೆಗಿಂತ 4 ದಿನ ಮೊದಲೇ ಇಡೀ ರಾಜ್ಯ ವ್ಯಾಪಿಸಿದ ಮುಂಗಾರು

ಬೆಂಗಳೂರು: ವಾಡಿಕೆಗಿಂತ 4 ದಿನ ಮೊದಲೇ ಇಡೀ ರಾಜ್ಯವನ್ನು ಮುಂಗಾರು ವ್ಯಾಪಿಸಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಜೂನ್ 1ರಂದು ಶನಿವಾರ ಮುಂಗಾರು ರಾಜ್ಯಕ್ಕೆ ಪ್ರವೇಶಿಸಿದ್ದು, ಇದಾದ ಕೇವಲ ಐದು ದಿನದಲ್ಲಿ ಇಡೀ ರಾಜ್ಯವನ್ನು ವ್ಯಾಪಿಸಿದೆ. ಈ ಮೂಲಕ ವಾಡಿಕೆಗಿಂತ 4 ದಿನಗಳ ಮೊದಲೇ ಮುಂಗಾರು ಇಡೀ ರಾಜ್ಯಕ್ಕೆ ವ್ಯಾಪಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮುಂದಿನ 24 ಗಂಟೆ ಅವಧಿಯಲ್ಲಿ ಉತ್ತರ ಒಳನಾಡಿನ ಕಲಬುರಗಿ, ವಿಜಯಪುರ, ಯಾದಗಿರಿ, ಬೆಳಗಾವಿ ಹಾಗೂ ದಕ್ಷಿಣ ಒಳನಾಡಿನ ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಮೈಸೂರು, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಭಾರಿ ಮಳೆ ಆಗುವ ಸಂಭವವಿದೆ. 6ರಿಂದ 11 ಸೆಂಟಿಮೀಟರ್ ವರೆಗೆ ಮಳೆಯಾಗುವ ಸಾಧ್ಯತೆಯಿದ್ದು, ಯೆಲ್ಲೋ ಅಲರ್ಟ್ ನೀಡಲಾಗಿದೆ. ಜೂನ್ 13 ರವರೆಗೆ ರಾಜ್ಯದಲ್ಲಿ ಮಳೆ ಮುಂದುವರೆಯಲಿದೆ ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular