HomeKarnatakaRain Alert : ನಾಳೆವರೆಗೂ ಮಾತ್ರ ರಾಜ್ಯದಲ್ಲಿ ‘ಮಳೆ’ ಆಟ : ಆಮೇಲೆ ವಿಪರೀತ ಚಳಿ...

Rain Alert : ನಾಳೆವರೆಗೂ ಮಾತ್ರ ರಾಜ್ಯದಲ್ಲಿ ‘ಮಳೆ’ ಆಟ : ಆಮೇಲೆ ವಿಪರೀತ ಚಳಿ ಕಾಟ..!

ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ನಾಳೆವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗೂ ಜ.12 ರಿಂದ ಮತ್ತೆ ರಾಜ್ಯದಲ್ಲಿ ವಿಪರೀತ ಚಳಿ ಮುಂದುವರೆಯಲಿದೆ.

ಇಂದು ಮತ್ತು ನಾಳೆ ಕರಾವಳಿ ಜಿಲ್ಲೆ ಸೇರಿದಂತೆ ಹಲವು ಕಡೆ ಸಾಧಾರಣೆ ಮಳೆಯಾಗಲಿದೆ. ಕೆಲವು ಕಡೆ ಮೋಡ ಮುಸುಕಿದ ವಾತಾವರಣವಿರಲಿದೆ.

ಜನವರಿ 10 ಹಾಗೂ 11 ರಂದು ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ವ್ಯಾಪಕ ಮಳೆಯಾಗುವ ಮುನ್ಸೂಚನೆಯಿದೆ. ನಂತರ ಉತ್ತರ ಕರ್ನಾಟಕದ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಹಾವೇರಿ ಹಾಗೂ ಕಲಬುರಗಿ, ವಿಜಯಪುರದ ಪ್ರತ್ಯೇಕ ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ನಗರ, , ಚಿತ್ರದುರ್ಗ, ದಾವಣಗೆರೆ ಸೇರಿದಂತೆ ಕೋಲಾರ, ಮಂಡ್ಯ, ಮೈಸೂರು, ರಾಮನಗರ, ವಿಜಯನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ತುಮಕೂರಲ್ಲಿ ಮಳೆಯಾಗುವ ಮುನ್ಸೂಚನೆಯಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular