ಬೆಂಗಳೂರು: ಭಾರತ-ಪಾಕಿಸ್ತಾನ ನಡುವಿನ ಸಂಘರ್ಷದ ಕಾರಣದಿಂದಾಗಿ ಒಂದು ವಾರ ಸ್ಥಗಿತಗೊಂಡಿದ್ದ 18ನೇ ಆವೃತ್ತಿಯ ಐಪಿಎಲ್ ಪುನರಾರಂಭಕ್ಕೆ ಮಳೆ ಅಡ್ಡಿಯಾಗಿದೆ.
ಶನಿವಾರ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಕೊಲ್ಕತ್ತಾ ನೈಟ್ ರೈಡರ್ಸ್ ನಡುವಿನ ಪಂದ್ಯ ಟಾಸ್ ಕೂಡ ಕಾಣದೆ ರದ್ದಾಗಿದೆ. ಉಭಯ ತಂಡಗಳಿಗೆ ತಲಾ ಒಂದು ಅಂಕ ಹಂಚಿಕೆ ಮಾಡಲಾಗಿದೆ.
ಇದರಿಂದಾಗಿ ಹಾಲಿ ಚಾಂಪಿಯನ್ ಕೆಕೆಆರ್ ಪ್ಲೇ ಆಫ್ ರೇಸ್ ನಿಂದ ಹೊರ ಬಿದ್ದಿದೆ. ಆರ್‌ಸಿಬಿ ಪ್ಲೇ ಆಫ್ ರೇಸ್ ಹೊಸ್ತಿಲು ತಲುಪಿದೆ. ಅಗ್ರ ನಾಲ್ಕರಲ್ಲಿ ಸ್ಥಾನ ಬಹುತೇಕ ಖಚಿತವಾಗಿದೆ. ತಂಡ ಬಾಕಿ ಇರುವ ಎರಡು ಪಂದ್ಯಗಳಲ್ಲಿ ಒಂದರಲ್ಲಿ ಗೆದ್ದರೂ ಅಗ್ರ ಎರಡರಲ್ಲಿ ಸ್ಥಾನ ಗಳಿಸಿ ಕ್ವಾಲಿಫೈಯರ್ -1 ಪಂದ್ಯಕ್ಕೆ ಅರ್ಹತೆ ಪಡೆಯುವ ಸಾಧ್ಯತೆ ಇದೆ.