HomeLatest Newsಐಪಿಎಲ್ ಪಂದ್ಯಕ್ಕೆ ಮಳೆ ಅಡ್ಡಿ: ಹಾಲಿ ಚಾಂಪಿಯನ್ ಕೆಕೆಆರ್ ಔಟ್, RCB ಪ್ಲೇಆಫ್ ಪ್ರವೇಶ ಬಹುತೇಕ...

ಐಪಿಎಲ್ ಪಂದ್ಯಕ್ಕೆ ಮಳೆ ಅಡ್ಡಿ: ಹಾಲಿ ಚಾಂಪಿಯನ್ ಕೆಕೆಆರ್ ಔಟ್, RCB ಪ್ಲೇಆಫ್ ಪ್ರವೇಶ ಬಹುತೇಕ ಖಚಿತ

ಬೆಂಗಳೂರು: ಭಾರತ-ಪಾಕಿಸ್ತಾನ ನಡುವಿನ ಸಂಘರ್ಷದ ಕಾರಣದಿಂದಾಗಿ ಒಂದು ವಾರ ಸ್ಥಗಿತಗೊಂಡಿದ್ದ 18ನೇ ಆವೃತ್ತಿಯ ಐಪಿಎಲ್ ಪುನರಾರಂಭಕ್ಕೆ ಮಳೆ ಅಡ್ಡಿಯಾಗಿದೆ.

ಶನಿವಾರ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಕೊಲ್ಕತ್ತಾ ನೈಟ್ ರೈಡರ್ಸ್ ನಡುವಿನ ಪಂದ್ಯ ಟಾಸ್ ಕೂಡ ಕಾಣದೆ ರದ್ದಾಗಿದೆ. ಉಭಯ ತಂಡಗಳಿಗೆ ತಲಾ ಒಂದು ಅಂಕ ಹಂಚಿಕೆ ಮಾಡಲಾಗಿದೆ.

ಇದರಿಂದಾಗಿ ಹಾಲಿ ಚಾಂಪಿಯನ್ ಕೆಕೆಆರ್ ಪ್ಲೇ ಆಫ್ ರೇಸ್ ನಿಂದ ಹೊರ ಬಿದ್ದಿದೆ. ಆರ್‌ಸಿಬಿ ಪ್ಲೇ ಆಫ್ ರೇಸ್ ಹೊಸ್ತಿಲು ತಲುಪಿದೆ. ಅಗ್ರ ನಾಲ್ಕರಲ್ಲಿ ಸ್ಥಾನ ಬಹುತೇಕ ಖಚಿತವಾಗಿದೆ. ತಂಡ ಬಾಕಿ ಇರುವ ಎರಡು ಪಂದ್ಯಗಳಲ್ಲಿ ಒಂದರಲ್ಲಿ ಗೆದ್ದರೂ ಅಗ್ರ ಎರಡರಲ್ಲಿ ಸ್ಥಾನ ಗಳಿಸಿ ಕ್ವಾಲಿಫೈಯರ್ -1 ಪಂದ್ಯಕ್ಕೆ ಅರ್ಹತೆ ಪಡೆಯುವ ಸಾಧ್ಯತೆ ಇದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular