ಬೆಂಗಳೂರು: ಕರಾವಳಿ ಜಿಲ್ಲೆಗಳು ಸೇರಿದಂತೆ ರಾಜ್ಯಾದ್ಯಂತ ಇಂದಿನಿಂದ ಮತ್ತೆ ಮಳೆಯ ಅಬ್ಬರ ಜೋರಾಗಲಿದೆ. ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಹಲವೆಡೆ ಅವಾಂತರಗಳು ಸೃಷ್ಟಿಯಾಗಿವೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳುರು, ಶಿವಮೊಗ್ಗ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ಥಗೊಂಡಿದೆ. ಉತ್ತರ ಕನ್ನಡ, ಶಿವಮೊಗ್ಗ ಜಿಲ್ಲೆಯಲ್ಲಿ ವರುಣಾರ್ಭಟ ಹಿನ್ನೆಲೆಯಲ್ಲಿ ಹಲವೆಡೆ ಮುಂಜಾಗೃತಾ ಕ್ರಮವಾಗಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಕುಮಟಾ, ಅಂಕೋಲಾ, ಹೊನ್ನಾವರ, ಭಟ್ಕಳ, ಶಿರಸಿ, ಸಿದ್ದಾಪುರ, ಯಲ್ಲಾಪುರ, ದಾಂಡೇಲಿ ಹಾಗೂ ಜೋಯಿಡಾ ತಾಲ್ಲೂಕುಗಳ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ.
ಇನ್ನು ಮಳೆ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಶಾಲಾ ಕಾಲೇಜುಗಳಿಗೆ ನಾಳೆ ರಜೆ ಘೋಷಿಸಲಾಗಿದೆ.