ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು, ವರುಣಾರ್ಭಟ ಮತ್ತಷ್ಟು ಜೋರಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈಗಾಗಲೇ ಜಿಲ್ಲೆಯಲ್ಲಿ ಧಾರಾಕಾರ ಮಳೆಯಿಂದಾಗಿ ಸಾಲು ಸಾಲು ಅವಾಂತರಗಳು ಸೃಷ್ಟಿಯಾಗಿವೆ. ಈ ನಡುವೆ ಹಾವಾಮಾನ ಇಲಾಖೆ ಭಾರಿ ಮಳೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಐದು ತಾಲೂಕಿನ ಅಂಗನವಾಡಿ, ಶಾಲೆ-ಕಾಲೇಜುಗಳಿಗೆ ನಾಳೆ ರಜೆ ಘೋಷಿಸಲಾಗಿದೆ.
ಚಿಕ್ಕಮಗಳೂರು ಜಿಲ್ಲೆಯ ಕಳಸ, ಮೂಡಿಗೆರೆ, ಶೃಂಗೇರಿ, ಕೊಪ್ಪ, ಎನ್.ಆರ್.ಪುರ ತಾಕೂಕುಗಳಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ನಾಳೆ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ.