ಇಂದಿನಿಂದ ರಾಜ್ಯಾದ್ಯಂತ ತಗ್ಗಲಿದೆ ಮಳೆಯ ಪ್ರಮಾಣ: ಹೆಚ್ಚಲಿದೆ ಚಳಿಯ ತೀವ್ರತೆ

ಬೆಂಗಳೂರು: ಇಂದಿನಿಂದ ರಾಜ್ಯದಾದ್ಯಂತ ಮಳೆಯ ಪ್ರಮಾಣ ಗಣನೀಯವಾಗಿ ತಗ್ಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ನವೆಂಬರ್ 17, 18 ರಂದು ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗುವ ಸಂಭವ ಇದೆ. ಈ ಅವಧಿಯಲ್ಲಿ ಉತ್ತರ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಒಣಹವೆ ಇರುತ್ತದೆ.

ನವೆಂಬರ್ 19ರಿಂದ ರಾಜ್ಯಾದ್ಯಂತ ಒಣ ಹವೆ ಇರಲಿದ್ದು, ಚಳಿ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಶನಿವಾರ ತುಮಕೂರು ಜಿಲ್ಲೆಯ ಮಧುಗಿರಿ, ರಾಮನಗರ ಜಿಲ್ಲೆಯ ಚನ್ನಪಟ್ಟಣದಲ್ಲಿ ತಲಾ 2 ಸೆಂ.ಮೀ., ಕೊಪ್ಪಳ ಜಿಲ್ಲೆಯ ಕುಷ್ಟಗಿ, ರಾಮನಗರ ಜಿಲ್ಲೆ ಮಾಗಡಿ, ಬೆಂಗಳೂರು ನಗರ ಜಿಲ್ಲೆ ಎಲೆಕ್ಟ್ರಾನಿಕ್ ಸಿಟಿ, ತುಮಕೂರು ಜಿಲ್ಲೆಯ ವೈ.ಎನ್. ಹೊಸಕೋಟೆ, ಮಂಡ್ಯ ಜಿಲ್ಲೆಯ ನಾಗಮಂಗಲ, ಚಾಮರಾಜನಗರ ಜಿಲ್ಲೆಯ ಬಂಡಿಪುರದಲ್ಲಿ ತಲಾ 1 ಸೆಂ.ಮೀ. ಮಳೆಯಾಗಿದೆ. ಉಳಿದಂತೆ ರಾಜ್ಯದ ವಿವಿಧೆಡೆ ತುಂತುರು ಮಳೆಯಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read