ಕಾರವಾರ: ರಾಜ್ಯದಲ್ಲಿ ವರುಣಾರ್ಭಟ ಮುಂದುವರೆದಿದ್ದು, ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಮಳೆಯ ಅಬ್ಬರಕ್ಕೆ ಜನಜೀವನ ಅಸ್ತವ್ಯಸ್ಥಗೊಂಡಿದೆ. ಕೆಲ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ನಾಳೆಯೂ ಮಳೆಯ ಅಬ್ಬರ ಜೋರಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಐದು ತಾಲೂಕುಗಳಲ್ಲಿ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ ಹಾಗೂ ಭಟ್ಕಳ ತಾಲೂಕಿನ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಆದೇಶ ಹೊರಡಿಸಿದ್ದಾರೆ.