HomeLatest Newsಮೇ 7 ರವರೆಗೆ ರಾಜ್ಯದಲ್ಲಿ ಗುಡಗು, ಮಿಂಚು ಬಿರುಗಾಳಿ ಸಹಿತ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಮೇ 7 ರವರೆಗೆ ರಾಜ್ಯದಲ್ಲಿ ಗುಡಗು, ಮಿಂಚು ಬಿರುಗಾಳಿ ಸಹಿತ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಬಿಸಿಲು, ತಾಪಮಾನ ಹೆಚ್ಚಾಗಿರುವ ಬೆನ್ನಲ್ಲೇ ಮೇ 1ರಿಂದ 7 ದಿನಗಳ ಕಾಲ ಬಿರುಗಾಳಿ ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮೇ 1 ರಿಂದ 7 ರವರೆಗೆ ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ದಕ್ಷಿಣ ಒಳನಾಡಿನ ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ಕೋಲಾರ, ಮೈಸೂರು, ಮಂಡ್ಯ, ಚಿಕ್ಕಬಳ್ಳಾಪುರ, ಚಾಮರಾಜನಗರ, ದಾವಣಗೆರೆ, ಚಿತ್ರದುರ್ಗ ವ್ಯಾಪ್ತಿಯಲ್ಲಿ ಗುಡುಗು ಮಿಂಚು ಸಹಿತ ಬಿರುಗಾಳಿಯಿಂದ ಕೂಡಿದ ಮಳೆಯಾಗಲಿದೆ.

ಕೊಪ್ಪಳ, ಕಲಬುರಗಿ, ರಾಯಚೂರು, ವಿಜಯಪುರ, ಬೀದರ್, ಧಾರವಾಡ, ಯಾದಗಿರಿ, ಬಾಗಲಕೋಟೆ, ಗದಗ, ಹಾವೇರಿಯಲ್ಲಿ ಮುಂದಿನ 48 ಗಂಟೆ ಸಾಧಾರಣ ಪ್ರಮಾಣದಲ್ಲಿ ಮಳೆಯಾಗುವ ಸಂಭವವಿದೆ. ಕೆಲವು ಕಡೆಗಳಲ್ಲಿ ಪ್ರತಿ ಗಂಟೆಗೆ 40 ಕಿ.ಮೀ. ವೇಗದಲ್ಲಿ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular