HomeKarnatakaರಾಜ್ಯಾದ್ಯಂತ ಇಂದು ವ್ಯಾಪಕ ಮಳೆ ಸಾಧ್ಯತೆ: ಹಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ರಾಜ್ಯಾದ್ಯಂತ ಇಂದು ವ್ಯಾಪಕ ಮಳೆ ಸಾಧ್ಯತೆ: ಹಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ಬೆಂಗಳೂರು: ರಾಜ್ಯದ ಕರಾವಳಿ, ಮಲೆನಾಡು ಜಿಲ್ಲೆಗಳ ಬಹುತೇಕ ಭಾಗದಲ್ಲಿ ಭಾನುವಾರ ಹೆಚ್ಚಿನ ಮಳೆಯಾಗಿದೆ. ಇನ್ನು ಎರಡು ಮೂರು ದಿನ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮನ್ಸೂಚನೆ ನೀಡಿದೆ.

ಸೆ. 30ರಂದು ರಾಜ್ಯಾದ್ಯಂತ ವ್ಯಾಪಕ ಮಳೆ ಆಗುವ ಸಂಭವ ಇದೆ. ಮಲೆನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ, ದಕ್ಷಿಣ ಒಳನಾಡಿದನ ಗದಗ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ಮೈಸೂರು, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಅ. 1ರಂದು ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಂಭವ ಇದ್ದು, ಮಲೆನಾಡಿನ ಕೊಡಗು, ಚಿಕ್ಕಮಗಳೂರು, ಹಾಸನ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉಳಿದಂತೆ ದಕ್ಷಿಣ ಒಳನಾಡು, ಕರಾವಳಿ, ಉತ್ತರ ಒಳನಾಡಿನ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular