HomeKarnatakaಗುಡುಗು, ಗಾಳಿ ಸಹಿತ ಮಳೆ ಮುನ್ಸೂಚನೆ: ಆರೆಂಜ್ ಅಲರ್ಟ್

ಗುಡುಗು, ಗಾಳಿ ಸಹಿತ ಮಳೆ ಮುನ್ಸೂಚನೆ: ಆರೆಂಜ್ ಅಲರ್ಟ್

ಬೆಂಗಳೂರು: ಉತ್ತರ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಕೆಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ.

ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರಗಿ, ಬೀದರ್, ಗದಗ, ಧಾರವಾಡ, ಹಾವೇರಿ ಜಿಲ್ಲೆಗಳಲ್ಲಿ ಬುಧವಾರ ಒಂದೆರಡು ಕಡೆಗಳಲ್ಲಿ ಗುಡುಗು ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಚಿತ್ರದುರ್ಗ, ಬಳ್ಳಾರಿ, ಮೈಸೂರು, ಮಂಡ್ಯ ಜಿಲ್ಲೆಗಳ ಕೆಲವು ಕಡೆ ಮಳೆಯಾಗುವ ಸಾಧ್ಯತೆಯಿದ್ದು, ಯೆಲ್ಲೋ ಅಲರ್ಟ್ ನೀಡಲಾಗಿದೆ. ಏಪ್ರಿಲ್ 26 ರಿಂದ 30ರವರೆಗೆ ರಾಜ್ಯಾದ್ಯಂತ ಮಳೆ ಸಾಧ್ಯತೆ ಕಡಿಮೆ ಇರಲಿದೆ. ಬಿಸಿಲು ಹೆಚ್ಚಾಗಲಿದ್ದು, ಈ ಅವಧಿಯಲ್ಲಿ ಉಷ್ಣ ಅಲೆ ಬೀಸುವ ಸಾಧ್ಯತೆ ಇರುತ್ತದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular