HomeKarnatakaಗಮನಿಸಿ: ರಾಜ್ಯದ ವಿವಿಧೆಡೆ 4 ದಿನ ಮಳೆ: ಕೆಲ ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’

ಗಮನಿಸಿ: ರಾಜ್ಯದ ವಿವಿಧೆಡೆ 4 ದಿನ ಮಳೆ: ಕೆಲ ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’

ಬೆಂಗಳೂರು: ರಾಜ್ಯದ ದಕ್ಷಿಣ ಒಳನಾಡಿನ 9 ಜಿಲ್ಲೆಗಳಲ್ಲಿ ಮುಂದಿನ 4 ದಿನಗಳ ಕಾಲ ಮಳೆಯಾಗುವ ಸಂಭವ ಇದ್ದು, ಈ ಜಿಲ್ಲೆಗಳಿಗೆ ಹವಾಮಾನ ಇಲಾಖೆಯಿಂದ ಯೆಲ್ಲೋ ಅಲರ್ಟ್ ನೀಡಲಾಗಿದೆ.

ನ. 4ರಂದು ಕೊಡಗು ಜಿಲ್ಲೆಯಲ್ಲಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನ. 5 ರಂದು ಕೊಡಗು, ಚಾಮರಾಜನಗರ, ಮೈಸೂರು, ಮಂಡ್ಯ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

ನ. 6 ರಂದು ಚಾಮರಾಜನಗರ, ರಾಮನಗರ, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

ನ. 7 ರಂದು ಶಿವಮೊಗ್ಗ, ತುಮಕೂರು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ನೀಡಲಾಗಿದೆ.

ಮುಂದಿನ ಒಂದು ವಾರದ ರಾಜ್ಯದ ದಕ್ಷಿಣ ಒಳನಾಡು, ಕರಾವಳಿ, ಮಲೆನಾಡು ಭಾಗದಲ್ಲಿ ಉತ್ತಮ ಮಳೆ ಆಗಲಿದೆ. ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular