HomeKarnatakaಗಮನಿಸಿ: ಅರಬ್ಬಿ ಸಮುದ್ರದಲ್ಲಿ ಸುಳಿಗಾಳಿ ಪರಿಣಾಮ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ 3 ದಿನ ಬಿರುಗಾಳಿ ಸಹಿತ...

ಗಮನಿಸಿ: ಅರಬ್ಬಿ ಸಮುದ್ರದಲ್ಲಿ ಸುಳಿಗಾಳಿ ಪರಿಣಾಮ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ 3 ದಿನ ಬಿರುಗಾಳಿ ಸಹಿತ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಸುಳಿಗಾಳಿಯ ಪರಿಣಾಮ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಮೂರು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ.

ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಜೂನ್ 11ರವರೆಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ಅವಧಿಯಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ ಆಗಲಿದೆ. ಉತ್ತರ ಕರ್ನಾಟಕದ ಕೆಲವು ಕಡೆ ಬಿರುಗಾಳಿ ಸಹಿತ ಭಾರಿ ಮಳೆ ಆಗಲಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನ ಎಲ್ಲಾ ಇಂದಿನಿಂದ ಜೂನ್ 11 ರವರೆಗೆ ಜಿಲ್ಲೆಗಳಲ್ಲಿಯೂ ಭಾರಿ ಮಳೆಯಾಗುವ ಸಂಭವ ಇದೆ. ಭಾರೀ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಸಾಧಾರಣ ಮಳೆ ಆಗಲಿದೆ. ಬೆಂಗಳೂರಿನಲ್ಲಿ ಮೂರು ದಿನಗಳ ಕಾಲ ಬಿರುಗಾಳಿ ಸಹಿತ ಭಾರಿ ಮಳೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಅದೇ ರೀತಿ ಶಿವಮೊಗ್ಗ, ದಾವಣಗೆರೆ, ಚಿಕ್ಕಮಗಳೂರು, ಹಾಸನ, ಕೊಡಗು, ಚಾಮರಾಜನಗರ, ಮೈಸೂರು ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಾಧ್ಯತೆ ಹಿನ್ನಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular