HomeKarnatakaಗಮನಿಸಿ: ರಾಜ್ಯದಲ್ಲಿ ನಾಳೆಯಿಂದ ಮಳೆ ಮುನ್ಸೂಚನೆ: ‘ಯೆಲ್ಲೋ ಅಲರ್ಟ್’ ಘೋಷಣೆ

ಗಮನಿಸಿ: ರಾಜ್ಯದಲ್ಲಿ ನಾಳೆಯಿಂದ ಮಳೆ ಮುನ್ಸೂಚನೆ: ‘ಯೆಲ್ಲೋ ಅಲರ್ಟ್’ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ನವೆಂಬರ್ 13 ರಿಂದ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಚಿಕ್ಕಮಗಳೂರು, ಕೊಡಗು, ಮೈಸೂರು, ಶಿವಮೊಗ್ಗ, ಚಾಮರಾಜನಗರದಲ್ಲಿ ನವೆಂಬರ್ 14ರಿಂದ ಮೂರು ದಿನ ಭಾರಿ ಮಳೆ ಆಗುವ ಸಾಧ್ಯತೆ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ಕೋಲಾರ, ಹಾಸನ, ತುಮಕೂರು, ರಾಮನಗರ, ಬಳ್ಳಾರಿ, ವಿಜಯನಗರ ಜಿಲ್ಲೆಗಳಲ್ಲಿ ನವೆಂಬರ್ 13 ರಿಂದ 16 ರವರೆಗೆ ಗುಡುಗು ಸಹಿತ ಮಳೆ ಆಗಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ನವೆಂಬರ್ 14ರಿಂದ ಎರಡು ದಿನ ಮಳೆಯಾಗಲಿದೆ.

ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಕೊಪ್ಪಳ, ಹಾವೇರಿ, ಕಲಬುರಗಿ, ರಾಯಚೂರು, ಯಾದಗಿರಿ, ವಿಜಯಪುರ ಜಿಲ್ಲೆಗಳಲ್ಲಿ ನವೆಂಬರ್ 15 ರಿಂದ 16 ರವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular