ಎರಡು ದಿನ 6 ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ: ಜೂ. 18ರವರೆಗೆ ರಾಜ್ಯಾದ್ಯಂತ ಮುಂದುವರೆಯಲಿದೆ ಮಳೆ

ಬೆಂಗಳೂರು: ಕರಾವಳಿಯ ಎರಡು ಜಿಲ್ಲೆ ಸೇರಿದಂತೆ ಆರು ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಯಲ್ಲಿ ಭಾರಿ ಮಳೆ ಆಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ.

ಅರಬ್ಬಿ ಸಮುದ್ರದಲ್ಲಿ ಸುಳಿಗಾಳಿ ಉಂಟಾಗಿರುವ ಪರಿಣಾಮ ರಾಜ್ಯಾದ್ಯಂತ ಮಳೆ ಆಗುತ್ತಿದೆ. ಕರಾವಳಿಯ ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಗದಗ, ಧಾರವಾಡ, ಕೊಪ್ಪಳದಲ್ಲಿ ಮುಂದಿನ ಎರಡು ದಿನ 20 ಸೆ.ಮೀ.ಗೂ ಅಧಿಕ ಮಳೆಯಾಗುವ ಸಂಭವ ಇದ್ದು ರೆಡ್ ಅಲರ್ಟ್ ನೀಡಲಾಗಿದೆ.

ವಿಜಯಪುರ, ಬಾಗಲಕೋಟೆ, ಶಿವಮೊಗ್ಗ, ಬಳ್ಳಾರಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದ್ದು, ದಾವಣಗೆರೆ, ಚಿಕ್ಕಮಗಳೂರು, ಯಾದಗಿರಿ, ರಾಯಚೂರು, ಕಲಬುರಗಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಜೂ. 14ರವರೆಗೆ ವಿವಿಧ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದ್ದು, ಜೂ. 18ರವರೆಗೆ ರಾಜ್ಯಾದ್ಯಂತ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read